Hashtagintro

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಡಿವೈಡರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, 5 ಮಂದಿ ಸಜೀವ ದಹನ

ಉತ್ತರ ಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಡಿವೈಡರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಕಾರು, 5 ಮಂದಿ ಸಜೀವ ದಹನ

ಲಕ್ನೋ, ನವೆಂಬರ್​​ 09: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಈ ವೇಳೆ ಬೆಂಕಿ ಹೊತ್ತಿಕೊಂಡ ಪರಿಣಾಮ ಅದರಲ್ಲಿದ್ದ 5 ಮಂದಿ ಸಜೀವ ದಹನವಾಗಿರುವ ಘಟನೆ ಉತ್ತರ ಪ್ರದೇಶದ ಮುಜಫ್ಫರ್‌ನಗರ ಜಿಲ್ಲೆಯಲ್ಲಿ ನಡೆದಿದೆ. ಕಾರಿನಲ್ಲಿದ್ದವರು ಹರಿಯಾಣದಿಂದ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಜಿಲ್ಲೆಯ ತಿತಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಮಾಹಿತಿಯ ಪ್ರಕಾರ, ಕಾರಿನಲ್ಲಿದ್ದ ಎಲ್ಲರೂ ಹರಿಯಾಣದ ಜಿಂದ್ ಜಿಲ್ಲೆಯ ನಿವಾಸಿಗಳು. ಇವರೆಲ್ಲರೂ ಜಿಂದ್‌ನಿಂದ ಹರಿದ್ವಾರದ ಕಡೆಗೆ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.

ಕ್ಷಣಾರ್ಧದಲ್ಲೇ ಕಾರಿಗೆ ವ್ಯಾಪಿಸಿದ ಬೆಂಕಿ

ಜಗಾಹೇಡಿ ಗ್ರಾಮದ ಸಮೀಪ ಇದ್ದಕ್ಕಿದ್ದಂತೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ರಸ್ತೆಯ ಮೇಲೆ ಪಲ್ಟಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿಗೆ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣಾರ್ಧದಲ್ಲೇ ಇಡೀ ವಾಹನವನ್ನು ಬೆಂಕಿಯ ಜ್ವಾಲೆಗಳು ಆವರಿಸಿವೆ. ಕಾರಿನಲ್ಲಿದ್ದವರಿಗೆ ಹೊರಬರಲು ಯಾವುದೇ ಅವಕಾಶ ಸಿಗಲಿಲ್ಲ. ರಸ್ತೆಯಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರೂ ಬೆಂಕಿಯ ತೀವ್ರತೆಗೆ ಅಸಹಾಯಕರಾಗಿದ್ದರು. ಹೀಗಾಗಿ ಯಾರ ಜೀವವನ್ನೂ ಉಳಿಸಲು ಸಾಧ್ಯವಾಗಿಲ್ಲ. ಮಾಹಿತಿ ತಿಳಿದ ತಕ್ಷಣ ತಿತಾವಿ ಪೊಲೀಸ್ ಠಾಣೆಯ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿವೆ.

ಇದನ್ನೂ ಓದಿ: ಅಂಗಾಂಗಗಳನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡಲು 4 ವರ್ಷದ ಬಾಲಕನ ಹತ್ಯೆ: ಆರೋಪಿಯ ಬಂಧನ

ಅಗ್ನಿಶಾಮಕ ಸಿಬ್ಬಂದಿ ಸಾಕಷ್ಟು ಹರಸಾಹಸ ಪಟ್ಟು ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಬಳಿಕ ಕಾರಿನೊಳಗೆ ಸಿಲುಕಿದ್ದ ಆರು ಮಂದಿಯ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ, ಮೃತದೇಹಗಳೆಲ್ಲವೂ ಸಂಪೂರ್ಣ ಸುಟ್ಟು ಕರಕಲಾಗಿದ್ದವು. ಪೊಲೀಸರು ಮೃತದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಗ್ರಾಮೀಣ ಪೊಲೀಸ್ ವರಿಷ್ಠಾಧಿಕಾರಿ ಸಂಜಯ್ ಮಹಾಡಿಕ್ ಹಾಗೂ ಫುಗಾನಾ ವಿಭಾಗದ ಪೊಲೀಸ್ ಉಪ ಅಧೀಕ್ಷಕರೂ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language