ನ್ಯೂಜಿಲೆಂಡ್ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಯ ಅಂತಿಮ ಪಂದ್ಯದಲ್ಲಿ ಟೀಂ ಇಂಡಿಯಾ ಮತ್ತೊಂದು ಐತಿಹಾಸಿಕ ದಾಖಲೆ ನಿರ್ಮಿಸಿದೆ. ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲಿ ಒಂದೇ ಕ್ಯಾಲೆಂಡರ್ ವರ್ಷದಲ್ಲಿ 400 ಸಿಕ್ಸರ್ಗಳನ್ನು ಸಿಡಿಸಿದ ವಿಶ್ವದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ಪಾತ್ರವಾಗಿದೆ(PC-PTI).
ಭಾನುವಾರ ಹ್ಯಾಮಿಲ್ಟನ್ನ ಸೆಡ್ಡನ್ ಪಾರ್ಕ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ನಡೆದ ಐದನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಭಾರತ ಈ ವಿಶೇಷ ಮೈಲಿಗಲ್ಲು ತಲುಪಿತು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟರ್ಗಳು ಒಟ್ಟು 11 ಸಿಕ್ಸರ್ಗಳನ್ನು ಸಿಡಿಸುವ ಮೂಲಕ 400 ಸಿಕ್ಸರ್ಗಳ ಗಡಿ ದಾಟಿದರು(PC-PTI).
ಈ ವರ್ಷ ಆಡಿರುವ 40 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಭಾರತ ಒಟ್ಟು 400 ಸಿಕ್ಸರ್ಗಳನ್ನು ಬಾರಿಸಿದೆ. ಈ ಪಟ್ಟಿಯಲ್ಲಿ ಭಾರತಕ್ಕೆ ಹೋಲಿಸಿದರೆ ಆಸ್ಟ್ರಿಯಾ ಮತ್ತು ವೆಸ್ಟ್ ಇಂಡೀಸ್ ತಂಡಗಳು ಬಹಳ ಹಿಂದಿವೆ. ಆಸ್ಟ್ರಿಯಾ 24 ಪಂದ್ಯಗಳಲ್ಲಿ 224 ಸಿಕ್ಸರ್ ಸಿಡಿಸಿದ್ದರೆ, ವೆಸ್ಟ್ ಇಂಡೀಸ್ 21 ಪಂದ್ಯಗಳಲ್ಲಿ 224 ಸಿಕ್ಸರ್ಗಳನ್ನು ಬಾರಿಸಿದೆ(PC-PTI).
ಇನ್ನು ಈ ವರ್ಷ ನ್ಯೂಜಿಲೆಂಡ್ ವಿರುದ್ಧದ ಪಂದ್ಯಗಳಲ್ಲೇ ಭಾರತ 142 ಸಿಕ್ಸರ್ಗಳನ್ನು ಸಿಡಿಸಿದೆ. ಒಂದೇ ಕ್ಯಾಲೆಂಡರ್ ವರ್ಷದಲ್ಲಿ ನಿರ್ದಿಷ್ಟ ಎದುರಾಳಿ ತಂಡದ ವಿರುದ್ಧ ಬಾರಿಸಿದ ಅತಿ ಹೆಚ್ಚು ಸಿಕ್ಸರ್ಗಳ ದಾಖಲೆಯೂ ಇದಾಗಿದೆ(PC-PTI).
ಭಾರತದ ಪರ ಸಿಕ್ಸರ್ ಸಿಡಿಸುವಲ್ಲಿ ಅಭಿಷೇಕ್ ಶರ್ಮಾ ಮುಂಚೂಣಿಯಲ್ಲಿದ್ದಾರೆ. ಅವರು ಈ ವರ್ಷ ಒಟ್ಟು 86 ಸಿಕ್ಸರ್ಗಳನ್ನು ಬಾರಿಸಿದ್ದಾರೆ. ಇಶಾನ್ ಕಿಶನ್ 60 ಸಿಕ್ಸರ್ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದರೆ, ಸಂಜು ಸ್ಯಾಮ್ಸನ್ 50 ಸಿಕ್ಸರ್ಗಳೊಂದಿಗೆ ಮೂರನೇ ಸ್ಥಾನದಲ್ಲಿದ್ದಾರೆ(PC-PTI).
Source: TV9 Kannada Sports





