Hashtagintro

ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ ಗೊತ್ತಾ?

ಕಾಶಿಯಿಂದ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಗಂಗೆ! ಕೋಲಾರದ ಅಂತರಗಂಗೆಯ ಮಹಿಮೆ ಗೊತ್ತಾ?

ಕೋಲಾರದಿಂದ ಕೇವಲ ಎರಡು ಕಿಲೋಮೀಟರ್ ದೂರದಲ್ಲಿರುವ ಪ್ರಸಿದ್ಧ ಯಾತ್ರಾಸ್ಥಳ ಅಂತರಗಂಗೆಯು ತನ್ನ ಪ್ರಾಚೀನ ಇತಿಹಾಸ ಮತ್ತು ಪೌರಾಣಿಕ ಹಿನ್ನೆಲೆಯಿಂದಾಗಿ ಭಕ್ತರ ಗಮನ ಸೆಳೆದಿದೆ. ಇದನ್ನು ರಾಜ್ಯದ ದಕ್ಷಿಣ ಕಾಶಿ ಎಂದೇ ಗುರುತಿಸಲಾಗುತ್ತದೆ. ಶತಶೃಂಗ ಪರ್ವತ ಶ್ರೇಣಿಯಲ್ಲಿ ನೆಲೆಸಿರುವ ಶ್ರೀ ಕಾಶಿ ವಿಶ್ವೇಶ್ವರ ಸ್ವಾಮಿಯ ದೇವಸ್ಥಾನವು ಇಲ್ಲಿನ ಪ್ರಮುಖ ಆಕರ್ಷಣೆಯಾಗಿದೆ. ಈ ಕ್ಷೇತ್ರದ ವಿಶೇಷತೆ ಏನೆಂದರೆ, ಇಲ್ಲಿ ಕಾಶಿಯಿಂದ ಗಂಗೆಯು ವರ್ಷದ 365 ದಿನಗಳೂ ಗುಪ್ತಗಾಮಿನಿಯಾಗಿ ಹರಿಯುತ್ತಾಳೆ ಎಂಬ ನಂಬಿಕೆ ಇದೆ. ಬಸವನ ಬಾಯಿಯಿಂದ ನಿರಂತರವಾಗಿ ಹರಿಯುವ ಈ ಗಂಗೆಯಲ್ಲಿ ಸ್ನಾನ ಮಾಡಿ ಕಾಶಿ ವಿಶ್ವೇಶ್ವರ ಸ್ವಾಮಿಯ ದರ್ಶನ ಪಡೆದರೆ, ಕಾಶಿಗೆ ಭೇಟಿ ನೀಡಿದಷ್ಟೇ ಪುಣ್ಯ ಪ್ರಾಪ್ತಿಯಾಗುತ್ತದೆ ಎಂದು ಭಕ್ತರು ನಂಬುತ್ತಾರೆ. ಕಾರ್ತಿಕ ಮಾಸದಲ್ಲಿ ಇಲ್ಲಿ ವಿಶೇಷ ಪೂಜೆಗಳು, ಲಕ್ಷದೀಪೋತ್ಸವ ಮತ್ತು ಜಾತ್ರೆಗಳು ವಿಜೃಂಭಣೆಯಿಂದ ನಡೆಯುತ್ತವೆ. ಈ ಸಮಯದಲ್ಲಿ ಲಕ್ಷಾಂತರ ಭಕ್ತರು ರಾಜ್ಯದ ಮೂಲೆ ಮೂಲೆಗಳಿಂದ ಮಾತ್ರವಲ್ಲದೆ, ಹೊರ ರಾಜ್ಯಗಳಿಂದಲೂ ಆಗಮಿಸಿ ದೇವರ ಕೃಪೆಗೆ ಪಾತ್ರರಾಗುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

 

 

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language