Hashtagintro

ಕೆಪಿಎಸ್​ಸಿ ಅಕ್ರಮ ಕುಳಗಳು ಜೈಲು ಪಾಲು: ಶಿವಶಂಕರಪ್ಪ, ಗೀತಾಗೆ ನ್ಯಾಯಾಂಗ ಬಂಧನ

ಕೆಪಿಎಸ್​ಸಿ ಅಕ್ರಮ ಕುಳಗಳು ಜೈಲು ಪಾಲು: ಶಿವಶಂಕರಪ್ಪ, ಗೀತಾಗೆ ನ್ಯಾಯಾಂಗ ಬಂಧನ

ಬೆಂಗಳೂರು, ಅಕ್ಟೋಬರ್ 21: ಕೆಪಿಎಸ್​ಸಿ ನೇಮಕಾತಿ ಅಕ್ರಮದ ಕಳ್ಳಾಟ ಬಗೆದಷ್ಟು ಬಯಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೆಪಿಎಸ್​ಸಿಯ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮತ್ತು ಮಾಜಿ ಸದಸ್ಯೆ ಗೀತಾ ಅವರನ್ನು ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡಿದೆ. ಸತತ ಎರಡು ವಾರಗಳ ಕಾಲ ವಿಚಾರಣೆ ನಡೆಸಿದ್ದ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಇಬ್ಬರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಸದ್ಯ ಇಬ್ಬರೂ ಕಂಬಿ ಹಿಂದೆ ಸೇರಿದ್ದಾರೆ. ಈ ನಡುವೆ, ಇಡಿ ಮತ್ತೊಂದು ನೇಮಕಾತಿ ಅಕ್ರಮದ ಬಗ್ಗೆ ತನಿಖೆ ಕೈಗೆತ್ತಿಕೊಂಡಿದೆ. ವಾಣಿಜ್ಯ ಇಲಾಖೆಯಲ್ಲಿನ 50 ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಶಿವಶಂಕರಪ್ಪ ಪುತ್ರಿ ಸುಮಾ ಸಾಹುಕಾರ್ ವಿರುದ್ಧ ವಿಧಾನಸೌಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಡಿಮೆ ಆದಾಯ ಪ್ರಮಾಣಪತ್ರ ನೀಡಿರುವ ಆರೋಪ ಸುಮಾ ಮೇಲಿದೆ. ಕೈಗಾರಿಕಾ ವಿಸ್ತರಣಾಧಿಕಾರಿ ಹುದ್ದೆಗೆ 3ಬಿ ಮೀಸಲಾತಿ ಅಡಿಯಲ್ಲಿ ಸುಮಾ ಪರೀಕ್ಷೆಗೆ ಹಾಜರಾಗಿದ್ದರು. 2014ರಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದ್ದು, 2016ರಲ್ಲಿ ಅರ್ಹತಾ ಪಟ್ಟಿ ಬಿಡುಗಡೆಯಾಗಿತ್ತು. ಈ ವೇಳೆ ಸುಮಾ ತಮ್ಮ ವಾರ್ಷಿಕ ಆದಾಯ 40,000 ರೂಪಾಯಿ ಎಂದು ನಮೂದಿಸಿದ್ದರು. ಆದರೆ, ಅವರ ತಂದೆ ಶಿವಶಂಕರಪ್ಪ ಅವರ ಆದಾಯಕ್ಕೂ, ಪ್ರಮಾಣಪತ್ರದಲ್ಲಿನ ಆದಾಯಕ್ಕೂ ಭಾರಿ ವ್ಯತ್ಯಾಸವಿರುವುದು ಪತ್ತೆಯಾಗಿದೆ. ಸದ್ಯ ಇಡಿ ಈ ಪ್ರಕರಣದ ತನಿಖೆಯನ್ನು ಮುಂದುವರಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language