Hashtagintro

ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಸಿಆರ್‌ಪಿಎಫ್ ಶಿಬಿರದ ಮೇಲೆ ಉಗ್ರರ ದಾಳಿ, ಮೂವರು ಸಿಬ್ಬಂದಿಗೆ ಗಾಯ

ಜಮ್ಮು-ಕಾಶ್ಮೀರದ ಕುಲ್ಗಾಮ್‌ನಲ್ಲಿ ಸಿಆರ್‌ಪಿಎಫ್ ಶಿಬಿರದ ಮೇಲೆ ಉಗ್ರರ ದಾಳಿ, ಮೂವರು ಸಿಬ್ಬಂದಿಗೆ ಗಾಯ

ಜಮ್ಮು, ನವೆಂಬರ್ 11: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ. ಅಖ್ರಾನ್ ಪ್ರದೇಶದ ಬಳಿ ಸಿಆರ್‌ಪಿಎಫ್ (ಕೇಂದ್ರ ಮೀಸಲು ಪೊಲೀಸ್ ಪಡೆ) ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ದಾಳಿ ನಡೆದಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಮೂವರು ಸಿಬ್ಬಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ನ ಅಖ್ರಾನ್‌ನಲ್ಲಿರುವ ಕೇಂದ್ರ ಮೀಸಲು ಪೊಲೀಸ್ ಪಡೆ ಶಿಬಿರದ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದಾರೆ. ಕುಲ್ಗಮ್ ಜಿಲ್ಲೆಯ ಮೀರ್ ಬಜಾರ್ ಬಳಿಯ ಅಖ್ರಾನ್‌ನಲ್ಲಿ ಈ ದಾಳಿ ನಡೆದಿದೆ.

ಬೈಕ್‌ನಲ್ಲಿ ಬಂದ ಉಗ್ರರಿಂದ ದಾಳಿ?
ಪ್ರಾಥಮಿಕ ಮಾಹಿತಿಯ ಪ್ರಕಾರ, ಮೋಟಾರ್‌ಸೈಕಲ್‌ನಲ್ಲಿ ಬಂದಿದ್ದ ಶಂಕಿತ ಉಗ್ರರು ಸಿಆರ್‌ಪಿಎಫ್ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ್ದಾರೆ ಎನ್ನಲಾಗಿದೆ. ದಾಳಿಯ ಬಳಿಕ ಭದ್ರತಾ ಸಿಬ್ಬಂದಿ ಪ್ರತಿದಾಳಿ ನಡೆಸಿದ್ದಾರೆ ಎಂದು ವರದಿಗಳು ತಿಳಿಸಿವೆ. ಆದರೆ ದಾಳಿಕೋರರ ಸಂಖ್ಯೆ, ಅವರ ಗುರುತು ಮತ್ತು ದಾಳಿಯ ಹಿಂದಿನ ಉದ್ದೇಶದ ಬಗ್ಗೆ ಅಧಿಕೃತವಾಗಿ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.

ಇದನ್ನೂ ಓದಿ: ಭದ್ರತಾ ಪಡೆ ನಡೆಸಿದ ಬಹುದೊಡ್ಡ ಕಾರ್ಯಚರಣೆ: ಗುಂಡಿನ ಚಕಮಕಿಯಲ್ಲಿ 14 ಮಾವೋವಾದಿಗಳು ಸಾವು

ಪ್ರದೇಶದಲ್ಲಿ ಶೋಧ ಕಾರ್ಯಾಚರಣೆ
ದಾಳಿಯ ಬಳಿಕ ಭದ್ರತಾ ಪಡೆಗಳು ಸುತ್ತಮುತ್ತಲಿನ ಪ್ರದೇಶವನ್ನು ಸುತ್ತುವರಿದಿದ್ದು, ದಾಳಿಕೋರರನ್ನು ಪತ್ತೆಹಚ್ಚಲು ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆ ಆರಂಭಿಸಿವೆ. ಪ್ರಮುಖ ರಸ್ತೆಗಳಲ್ಲಿ ತಪಾಸಣೆ ಹೆಚ್ಚಿಸಲಾಗಿದೆ. ದಾಳಿಕೋರರು ತಪ್ಪಿಸಿಕೊಳ್ಳದಂತೆ ಭದ್ರತಾ ಪಡೆಗಳು ನಿಗಾ ವಹಿಸಿವೆ. ಕುಲ್ಗಾಮ್ ದಕ್ಷಿಣ ಕಾಶ್ಮೀರದ ಪ್ರಮುಖ ಜಿಲ್ಲೆಯಾಗಿದ್ದು, ಈ ಭಾಗದಲ್ಲಿ ಭದ್ರತಾ ಪಡೆಗಳು ಉಗ್ರರ ಚಲನವಲನಗಳ ಮೇಲೆ ನಿರಂತರ ನಿಗಾ ಇಡುತ್ತಿವೆ. ಆದರೆ ಈ ದಾಳಿಯು ಹಿಂದಿನ ಯಾವುದೇ ಘಟನೆಯೊಂದಿಗೆ ಸಂಬಂಧ ಹೊಂದಿದೆಯೇ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language