Hashtagintro

ಟಾಸ್ ಗೆದ್ದ ನ್ಯೂಝಿಲೆಂಡ್: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ 2 ಬದಲಾವಣೆ

ಟಾಸ್ ಗೆದ್ದ ನ್ಯೂಝಿಲೆಂಡ್: ಟೀಮ್ ಇಂಡಿಯಾ ಪ್ಲೇಯಿಂಗ್ 11 ನಲ್ಲಿ 2 ಬದಲಾವಣೆ

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಐದನೇ ಏಕದಿನ ಪಂದ್ಯ ಶುರುವಾಗಿದೆ. ಮೌಂಟ್ ಮೌಂಗನುಯಿಯ ಬೇ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟ್ ಮಾಡಲಿದೆ.

ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಕಳೆದ ಮ್ಯಾಚ್​ನಲ್ಲಿ ಕಣಕ್ಕಿಳಿದಿದ್ದ ಗುರ್ನೂರ್ ಬ್ರಾರ್ ಹಾಗೂ ಕುಲ್ದೀಪ ಯಾದವ್ ಈ ಬಾರಿ ಹೊರಗುಳಿದಿದ್ದು, ಅವರ ಬದಲಿಗೆ ಮೊಹಮ್ಮದ್ ಸಿರಾಜ್ ಹಾಗೂ ಯಶ್ ಠಾಕೂರ್ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಭಾರತ (ಪ್ಲೇಯಿಂಗ್ XI): ರೋಹಿತ್ ಶರ್ಮಾ, ರುತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ನಮನ್ ಧೀರ್, ಆಖಿಬ್ ನಬಿ, ಅರ್ಷದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಯಶ್ ಠಾಕೂರ್.

ನ್ಯೂಝಿಲೆಂಡ್ (ಪ್ಲೇಯಿಂಗ್ XI): ವಿಲ್ ಯಂಗ್, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ನಿಕ್ ಕೆಲ್ಲಿ, ಡೀನ್ ಫಾಕ್ಸ್‌ಕ್ರಾಫ್ಟ್, ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಕ್ರಿಸ್ಟಿಯನ್ ಕ್ಲಾರ್ಕ್, ಬ್ಲೇರ್ ಟಿಕ್ನರ್, ಜೇಕಬ್ ಡಫಿ, ಮ್ಯಾಥ್ಯೂ ಫಿಶರ್.

ಸರಣಿ ನಿರ್ಣಾಯಕ:

ಈ ಪಂದ್ಯವು ಉಭಯ ತಂಡಗಳ ಪಾಲಿಗೆ ಸರಣಿ ನಿರ್ಣಾಯಕವಾಗಿದೆ. ಐದು ಪಂದ್ಯಗಳ ಈ ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದ್ದರೆ, ಮೂರನೇ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ನಾಲ್ಕನೇ ಪಂದ್ಯದಲ್ಲಿ ನ್ಯೂಝಿಲೆಂಡ್ ಜಯ ಸಾಧಿಸುವ ಮೂಲಕ ಸರಣಿಯನ್ನು 2-1 ಅಂತರಕ್ಕೆ ತಂದಿದೆ.

ಇದೀಗ ಸರಣಿಯನ್ನು ವಶಪಡಿಸಿಕೊಳ್ಳಬೇಕಾದರೆ ಟೀಮ್ ಇಂಡಿಯಾ ಇಂದಿನ ಪಂದ್ಯದಲ್ಲಿ ಗೆಲ್ಲಲೇಬೇಕಿದೆ. ಅತ್ತ ಸರಣಿಯನ್ನು ಸಮಬಲದಲ್ಲಿ (ಡ್ರಾ) ಅಂತ್ಯಗೊಳಿಸಲು ನ್ಯೂಝಿಲೆಂಡ್ ತಂಡಕ್ಕೆ ಗೆಲುವು ಅನಿವಾರ್ಯವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು.

ಭಾರತ ಏಕದಿನ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಇಶಾನ್ ಕಿಶನ್ (ಉಪ ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ತಿಲಕ್ ವರ್ಮಾ, ರುತುರಾಜ್ ಗಾಯಕ್ವಾಡ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ ಧೀರ್, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್), ಕುಲ್ದೀಪ್ ಯಾದವ್, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್, ಯಶ್ ಠಾಕೂರ್, ಆಖಿಬ್ ನಬಿ.

ಇದನ್ನೂ ಓದಿ: ಟೀಮ್ ಇಂಡಿಯಾ ಪ್ರವಾಸವಿಲ್ಲ… ಇಂಗ್ಲೆಂಡ್​ಗೆ 627 ಕೋಟಿ ರೂ. ನಷ್ಟದ ಭೀತಿ!

ನ್ಯೂಝಿಲೆಂಡ್ ಏಕದಿನ ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕಲ್ ಬ್ರೇಸ್‌ವೆಲ್, ಕ್ರಿಸ್ಟಿಯನ್ ಕ್ಲಾರ್ಕ್, ಜೇಕಬ್ ಡಫಿ, ಮ್ಯಾಟ್ ಫಿಶರ್, ಡೀನ್ ಫಾಕ್ಸ್‌ಕ್ರಾಫ್ಟ್, ಮಿಚ್ ಹೇ, ಬ್ಲೇರ್ ಟಿಕ್ನರ್, ಜೋಶ್ ಕ್ಲಾರ್ಕ್‌ಸನ್, ನಿಕ್ ಕೆಲ್ಲಿ, ಬ್ರೆಟ್ ರಾಂಡೆಲ್, ಟಿಮ್ ಸೈಫರ್ಟ್, ವಿಲ್ ಯಂಗ್.

 

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language