Hashtagintro

ಟೀಮ್ ಇಂಡಿಯಾ ಆಡುವ ಬಳಗದಲ್ಲಿ 2 ಬದಲಾವಣೆ

ಟೀಮ್ ಇಂಡಿಯಾ ಆಡುವ ಬಳಗದಲ್ಲಿ 2 ಬದಲಾವಣೆ

ಭಾರತ ಮತ್ತು ನ್ಯೂಝಿಲೆಂಡ್ ನಡುವಣ 5ನೇ ಟಿ20 ಪಂದ್ಯ ಶುರುವಾಗಿದೆ. ಹ್ಯಾಮಿಲ್ಟನ್​ನ ಸೆಡನ್ ಪಾರ್ಕ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ನ್ಯೂಝಿಲೆಂಡ್ ತಂಡದ ನಾಯಕ ಮಿಚೆಲ್ ಸ್ಯಾಂಟ್ನರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಲಿದೆ.

ಇನ್ನು ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಎರಡು ಬದಲಾವಣೆ ಮಾಡಿಕೊಂಡಿದೆ. ಕಳೆದ ಮ್ಯಾಚ್​ನಲ್ಲಿ ಕಣಕ್ಕಿಳಿದಿದ್ದ ಮಯಾಂಕ್ ಯಾದವ್ ಬದಲಿಗೆ ಈ ಪಂದ್ಯದಲ್ಲಿ ಭುವನೇಶ್ವರ್ ಕುಮಾರ್ ಕಣಕ್ಕಿಳಿದಿದ್ದಾರೆ. ಹಾಗೆಯೇ ಅಕ್ಷರ್ ಪಟೇಲ್ ಬದಲು ಸ್ಪಿನ್ನರ್ ವರುಣ್ ಚಕ್ರವರ್ತಿ ಆಡುವ ಬಳಗದಲ್ಲಿ ಕಾಣಿಸಿಕೊಂಡಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

ಭಾರತ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್, ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಭುವನೇಶ್ವರ್ ಕುಮಾರ್, ಅರ್ಷದೀಪ್ ಸಿಂಗ್, ಪ್ರಿನ್ಸ್ ಯಾದವ್, ವರುಣ್ ಚಕ್ರವರ್ತಿ.

ನ್ಯೂಝಿಲೆಂಡ್ (ಪ್ಲೇಯಿಂಗ್ XI): ಟಿಮ್ ಸೈಫರ್ಟ್, ಫಿನ್ ಅಲೆನ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಬೆವೊನ್ ಜೇಕಬ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಆ್ಯಡಂ ಮಿಲ್ನ್, ಜೇಕಬ್ ಡಫಿ, ಬ್ಲೇರ್ ಟಿಕ್ನರ್.

ಪಂದ್ಯಗಳ ಫಲಿತಾಂಶ:

  1. ಮೊದಲ ಪಂದ್ಯ: ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್ ನೀಡಿದ್ದ 225 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಭಾರತ, 4 ವಿಕೆಟ್‌ಗಳ ರೋಚಕ ಜಯ ಸಾಧಿಸಿತು.
  2.  ಎರಡನೇ ಪಂದ್ಯ: ಕ್ರೈಸ್ಟ್‌ಚರ್ಚ್‌ನಲ್ಲಿ ನಡೆದ ಎರಡನೇ ಹಣಾಹಣಿಯಲ್ಲೂ ಭಾರತ ತಂಡ 181 ರನ್‌ಗಳ ಗುರಿಯನ್ನು ಯಶಸ್ವಿಯಾಗಿ ತಲುಪಿ 4 ವಿಕೆಟ್‌ಗಳಿಂದ ಕಿವೀಸ್ ಪಡೆಗೆ ಸೋಲುಣಿಸಿತು.
  3.  ಮೂರನೇ ಪಂದ್ಯ: ವೆಲ್ಲಿಂಗ್ಟನ್‌ನಲ್ಲಿ ನಡೆದ ಮೂರನೇ ಪಂದ್ಯದಲ್ಲಿ ನ್ಯೂಝಿಲೆಂಡ್ ನೀಡಿದ ಗುರಿಯನ್ನು ಟೀಮ್ ಇಂಡಿಯಾ ಕೇವಲ 13.2 ಓವರ್‌ಗಳಲ್ಲಿ ಚೇಸ್ ಮಾಡಿ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು.
  4.  ನಾಲ್ಕನೇ ಪಂದ್ಯ: ಆಕ್ಲೆಂಡ್‌ನಲ್ಲಿ ನಡೆದ ನಾಲ್ಕನೇ ಪಂದ್ಯದಲ್ಲಿ ಗ್ಲೆನ್ ಫಿಲಿಪ್ಸ್ ಶತಕದ ನೆರವಿನಿಂದ 259 ರನ್ ಗಳಿಸಿದ ನ್ಯೂಝಿಲೆಂಡ್ ತಂಡ, ಭಾರತವನ್ನು 87 ರನ್‌ಗಳಿಂದ ಸೋಲಿಸಿ ಸರಣಿಯಲ್ಲಿ ಮೊದಲ ಗೆಲುವು ದಾಖಲಿಸಿತು.

ಭಾರತ ಟಿ20 ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ವೈಭವ್ ಸೂರ್ಯವಂಶಿ (ವಿಕೆಟ್ ಕೀಪರ್),  ತಿಲಕ್ ವರ್ಮಾ, ಅಕ್ಷರ್ ಪಟೇಲ್, ಶಿವಂ ದುಬೆ, ನಿತೀಶ್ ಕುಮಾರ್ ರೆಡ್ಡಿ, ನಮನ್ ಧೀರ್, ಪ್ರಿನ್ಸ್ ಯಾದವ್, ಮಾಯಾಂಕ್ ಯಾದವ್, ಅರ್ಷದೀಪ್ ಸಿಂಗ್ ಸಿಂಗ್, ಭುವನೇಶ್ವರ್ ಕುಮಾರ್, ವರುಣ್ ಚಕ್ರವರ್ತಿ, ಕುಲ್ದೀಪ್ ಯಾದವ್, ಇಶಾನ್ ಕಿಶನ್, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್).

ಇದನ್ನೂ ಓದಿ: ದೇಶೀಯ ಅಂಗಳಕ್ಕೆ ಮರಳಲಿರುವ ರೋಹಿತ್ ಶರ್ಮಾ

ನ್ಯೂಝಿಲೆಂಡ್ ಟಿ20 ತಂಡ: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್‌ವೆಲ್, ಡೆವೊನ್ ಕಾನ್ವೇ, ಜೇಕಬ್ ಡಫಿ, ಜ್ಯಾಕ್ ಫೌಲ್ಕ್ಸ್, ಬೆವನ್ ಜೇಕಬ್ಸ್, ಆ್ಯಡಮ್ ಮಿಲ್ನ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಟಿಮ್ ಸೈಫರ್ಟ್​, ಬ್ಲೇರ್ ಟಿಕ್ನರ್, ನಾಥನ್ ಸ್ಮಿತ್, ಮ್ಯಾಟ್ ಫಿಶರ್.

Source: TV9 Kannada Sports

Read full article on TV9 Kannada Sports

Leave a Comment

Your email address will not be published. Required fields are marked *

समाचार की भाषा चुनें / Choose News Language