Hashtagintro

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಎಐ ವಿಡಿಯೋ, ಸುಳ್ಳು ಮಾಹಿತಿ ವಿರುದ್ಧ ಎಚ್ಚರಿಕೆ

ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ: ಎಐ ವಿಡಿಯೋ, ಸುಳ್ಳು ಮಾಹಿತಿ ವಿರುದ್ಧ ಎಚ್ಚರಿಕೆ

ಬಾಲಿವುಡ್ ನಟ ಟೈಗರ್ ಶ್ರಾಫ್ ಅವರ ಕಾರಿನ ಮೇಲೆ ನಡೆದ ಗುಂಡಿನ ದಾಳಿಯ ಘಟನೆಯು ಚಿತ್ರರಂಗದಲ್ಲಿ ಭಾರೀ ಆತಂಕ ಮೂಡಿಸಿದೆ. ಅಕ್ಟೋಬರ್ 18ರಂದು ಮುಂಬೈನ ಜುಹು ಪ್ರದೇಶದಲ್ಲಿರುವ ಫುಟ್‌ಬಾಲ್ ಕ್ಲಬ್‌ನಿಂದ ಹೊರಡುವ ವೇಳೆ ಈ ಆಘಾತಕಾರಿ ಘಟನೆ ನಡೆದಿತ್ತು. ಈ ಘಟನೆಯಲ್ಲಿ ಟೈಗರ್ ಶ್ರಾಫ್ ಪ್ರಾಣಾಪಾಯದಿಂದ ಪಾರಾಗಿದ್ದರೂ, ಅವರ ಡ್ರೈವರ್ ಹಾಗೂ ಮತ್ತೊಬ್ಬರು ಗಾಯಗೊಂಡಿದ್ದರು. ಈ ಗಂಭೀರ ಘಟನೆಯ ಬೆನ್ನಲ್ಲೇ, ನಟನ ಹೆಸರನ್ನು ದುರುಪಯೋಗಪಡಿಸಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ನಕಲಿ ಸುದ್ದಿಗಳು ಮತ್ತು ಎಐ ಸೃಷ್ಟಿತ ವಿಡಿಯೋಗಳ ವಿರುದ್ಧ ಟೈಗರ್ ಶ್ರಾಫ್ ಅವರ ಅಧಿಕೃತ ತಂಡವು ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.

ಘಟನೆಯ ಕುರಿತು ನಟ ಅಥವಾ ಅವರ ತಂಡದಿಂದ ಯಾವುದೋ ಹೇಳಿಕೆಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವರದಿಗಳನ್ನು ತಂಡವು ಸಂಪೂರ್ಣವಾಗಿ ತಳ್ಳಿಹಾಕಿದೆ. ಈ ಕುರಿತು ಸ್ಪಷ್ಟನೆ ನೀಡಿರುವ ತಂಡವು, ‘ಇತ್ತೀಚಿನ ಘಟನೆ ಅಥವಾ ಅದಕ್ಕೆ ಸಂಬಂಧಿಸಿದ ಬೆಳವಣಿಗೆಗಳ ಕುರಿತು ಟೈಗರ್ ಶ್ರಾಫ್ ಯಾವುದೇ ಹೇಳಿಕೆಗಳನ್ನು ನೀಡಿಲ್ಲ. ಯಾವುದೇ ವಿಡಿಯೋಗಳನ್ನು ಬಿಡುಗಡೆ ಮಾಡಿಲ್ಲ ಮತ್ತು ಯಾವುದೇ ಅಧಿಕೃತ ಸಂವಹನಕ್ಕೆ ಅನುಮತಿ ನೀಡಿಲ್ಲ’ ಎಂದು ಸ್ಪಷ್ಟಪಡಿಸಿದೆ.

ಸಾಮಾಜಿಕ ಜಾಲತಾಣಗಳು ಮತ್ತು ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ವೀಕ್ಷಣೆಗಳಿಗಾಗಿ ಹಾಗೂ ಹಣ ಸಂಪಾದನೆಗಾಗಿ ಕೃತಕ ಬುದ್ಧಿಮತ್ತೆಯನ್ನು ಬಳಸಿ ಸುಳ್ಳು ವಿಡಿಯೋಗಳು ಮತ್ತು ಕಥೆಗಳನ್ನು ಸೃಷ್ಟಿಸುತ್ತಿರುವುದಕ್ಕೆ ತಂಡವು ತೀವ್ರ ಕಳವಳ ವ್ಯಕ್ತಪಡಿಸಿದೆ. ಇಂತಹ ಅನಧಿಕೃತ ಮತ್ತು ದಾರಿ ತಪ್ಪಿಸುವ ವಿಷಯಗಳು ಸಾರ್ವಜನಿಕರಲ್ಲಿ ಗೊಂದಲ ಮೂಡಿಸುತ್ತಿವೆ ಎಂದು ತಿಳಿಸಲಾಗಿದೆ.

 

View this post on Instagram

 

A post shared by Team Tiger Shroff (@teamtigershroff)

ಸುಳ್ಳು ಸುದ್ದಿಗಳು ಮತ್ತು ನಕಲಿ ವಿಡಿಯೋಗಳನ್ನು ಸೃಷ್ಟಿಸುವ ಅಥವಾ ಪ್ರಸಾರ ಮಾಡುವ ವ್ಯಕ್ತಿಗಳು ಅಥವಾ ಪೇಜ್‌ಗಳ ವಿರುದ್ಧ ತೀವ್ರ ಕಾನೂನು ಕ್ರಮ ಕೈಗೊಳ್ಳುವುದಾಗಿ ತಂಡವು ಎಚ್ಚರಿಕೆ ನೀಡಿದೆ. ‘ಇಂತಹ ಕಲ್ಪಿತ ವಿಷಯಗಳನ್ನು ಸೃಷ್ಟಿಸುವ, ಪ್ರಚಾರ ಮಾಡುವ ಅಥವಾ ಹಂಚಿಕೊಳ್ಳುವ ಯಾವುದೇ ವ್ಯಕ್ತಿ ಅಥವಾ ಪೇಜ್‌ಗಳು ತಕ್ಕ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ’ ಎಂದು ಹೇಳಿದೆ.

ಇದನ್ನೂ ಓದಿ: ಟೈಗರ್ ಶ್ರಾಫ್ ಮೇಲೆ ಗುಂಡಿನ ದಾಳಿ ಬಳಿಕ ಭಾರೀ ಭದ್ರತೆಯಲ್ಲಿ ಮನೆಯಿಂದ ಹೊರಬಂದ ಸಲ್ಮಾನ್ ಖಾನ್

ಮಾಧ್ಯಮ ಸಂಸ್ಥೆಗಳು ಹಾಗೂ ಡಿಜಿಟಲ್ ಪ್ಲಾಟ್‌ಫಾರ್ಮ್‌ಗಳು ಯಾವುದೇ ವಿಷಯವನ್ನು ಪ್ರಕಟಿಸುವ ಅಥವಾ ಹಂಚಿಕೊಳ್ಳುವ ಮೊದಲು ಅದರ ಸತ್ಯಾಸತ್ಯತೆಯನ್ನು ಪರಿಶೀಲಿಸುವಂತೆ ಮನವಿ ಮಾಡಲಾಗಿದೆ. ಕೇವಲ ಕ್ಲಿಕ್‌ಗಳು ಅಥವಾ ಹಣಕಾಸಿನ ಲಾಭಕ್ಕಾಗಿ ತಪ್ಪು ಮಾಹಿತಿಯನ್ನು ಬಿತ್ತರಿಸಬೇಡಿ ಎಂದು ಎಚ್ಚರಿಸಲಾಗಿದೆ. ಸಾರ್ವಜನಿಕರು ಯಾವುದೇ ರೀತಿಯ ಪರಿಶೀಲಿಸದ ಪೋಸ್ಟ್​ಗಳನ್ನು ನಂಬದೇ, ಕೇವಲ ಟೈಗರ್ ಶ್ರಾಫ್ ಅವರ ಅಧಿಕೃತ ಚಾನೆಲ್‌ಗಳ ಮೂಲಕ ಬರುವ ಅಧಿಕೃತ ಮಾಹಿತಿಯನ್ನು ಮಾತ್ರ ನಂಬುವಂತೆ ಕೋರಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language