Hashtagintro

ದರ್ಶನ್​ಗೆ ಹೆಚ್ಚಿದ ಬೆನ್ನು ನೋವು; ಜೈಲಿನಲ್ಲೇ ಫಿಸಿಯೋಥೆರಪಿ ಆರಂಭ

ದರ್ಶನ್​ಗೆ ಹೆಚ್ಚಿದ ಬೆನ್ನು ನೋವು; ಜೈಲಿನಲ್ಲೇ ಫಿಸಿಯೋಥೆರಪಿ ಆರಂಭ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿರುವ ನಟ ದರ್ಶನ್ ಅವರಿಗೆ ಜೈಲಿನಲ್ಲಿಯೇ ಚಿಕಿತ್ಸಾ ವ್ಯವಸ್ಥೆ ಮಾಡಲಾಗಿದೆ. ದರ್ಶನ್ ಎದುರಿಸುತ್ತಿರುವ ತೀವ್ರ ಬೆನ್ನು ನೋವಿನ ಸಮಸ್ಯೆಗೆ ಕೋರ್ಟ್ ಸೂಚನೆಯಂತೆ ಫಿಸಿಯೋಥೆರಪಿ ಚಿಕಿತ್ಸೆಯನ್ನು ಆರಂಭಿಸಲಾಗಿದೆ.

ನ್ಯಾಯಾಲಯ ನೀಡಿದ್ದ ನಿರ್ದೇಶನದಂತೆ ಜೈಲಾಧಿಕಾರಿಗಳು ವೈದ್ಯರಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಜಯ್ ಗಾಂಧಿ ಆಸ್ಪತ್ರೆಯ ಫಿಸಿಯೋಥೆರಪಿ ಸ್ಪೆಷಲಿಸ್ಟ್ ವೈದ್ಯರ ತಂಡವು ಜೈಲಿಗೆ ಭೇಟಿ ನೀಡಿ ದರ್ಶನ್ ಅವರಿಗೆ ಚಿಕಿತ್ಸೆ ನೀಡಲು ಆರಂಭಿಸಿದೆ.

ದರ್ಶನ್ ಅವರ ಆರೋಗ್ಯ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪ್ರತಿ 2 ರಿಂದ 3 ದಿನಕ್ಕೊಮ್ಮೆ ಫಿಸಿಯೋಥೆರಪಿ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. ಮೊದಲ ದಿನದ ಭಾಗವಾಗಿ ಜೈಲಿನ ಬ್ಯಾರಕ್‌ನಲ್ಲಿಯೇ ವೈದ್ಯರು ಸುಮಾರು ಒಂದೂವರೆ ತಾಸು ದರ್ಶನ್ ಅವರಿಗೆ ಫಿಸಿಯೋಥೆರಪಿ ಮಾಡಿದ್ದಾರೆ.

ಈ ಹಿಂದೆ ಕೂಡ ದರ್ಶನ್ ಅವರಿಗೆ ಸಂಜಯ್ ಗಾಂಧಿ ಆಸ್ಪತ್ರೆಯ ವೈದ್ಯರಿಂದಲೇ ಹಂತ ಹಂತವಾಗಿ ಫಿಸಿಯೋಥೆರಪಿ ಚಿಕಿತ್ಸೆ ನೀಡಲಾಗಿತ್ತು. ಆ ಸಂದರ್ಭದಲ್ಲಿ ನೀಡಲಾಗಿದ್ದ ಫಿಸಿಯೋ ಥೆರಪಿಯಿಂದದರ್ಶನ್ ಅವರ ಬೆನ್ನು ನೋವಿನ ಸಮಸ್ಯೆ ಗಣನೀಯವಾಗಿ ಕಡಿಮೆಯಾಗಿತ್ತು.

ಇದನ್ನೂ ಓದಿ: ದರ್ಶನ್ ಜೈಲಿನಿಂದ ಬಿಡುಗಡೆಯಾಗಲಿ ಎಂದು ಹಾಸನಾಂಬೆಗೆ ಹರಕೆ ಹೊತ್ತ ಅಭಿಮಾನಿ

ಕೋರ್ಟ್ ಆದೇಶದ ಅನ್ವಯ ಜೈಲಿನಲ್ಲಿಯೇ ಚಿಕಿತ್ಸೆ ಮುಂದುವರಿಸಲಾಗುತ್ತಿದೆ. ಇದೀಗ ಜೈಲಾಧಿಕಾರಿಗಳು ವೈದ್ಯಕೀಯ ತಂಡಕ್ಕೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕಾರಾಗೃಹದ ಆವರಣದಲ್ಲಿ ಒದಗಿಸಿದ್ದಾರೆ. ವೈದ್ಯರ ಉಸ್ತುವಾರಿಯಲ್ಲಿ ದರ್ಶನ್ ಚೇತರಿಸಿಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source: TV9 Kannada Entertainment

Read full article on TV9 Kannada Entertainment

Leave a Comment

Your email address will not be published. Required fields are marked *

समाचार की भाषा चुनें / Choose News Language