Hashtagintro

ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿ ಮೋದಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು

ನದಿ ತಿರುವು ವಿರೋಧಿಸಿ ಸಿಎಂ, ಪ್ರಧಾನಿ ಮೋದಿಗೆ ಪತ್ರ ಬರೆದ ಶಿರಸಿಯ ಶಾಲಾ ಮಕ್ಕಳು

ಶಿರಸಿ, ಅಕ್ಟೋಬರ್ 31: ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಇಂದು ಬೈರಂಬೇ ಪ್ರೌಢಶಾಲಾ ವಿದ್ಯಾರ್ಥಿಗಳು ಸ್ವಯಂ ಪ್ರೇರಣೆಯಿಂದ ಉತ್ತರ ಕನ್ನಡ ಜಿಲ್ಲೆಯ ಬೇಡ್ತಿ ನದಿ ತಿರುವು ಯೋಜನೆ ವಿರೋಧಿಸಿ ಪತ್ರ ಚಳುವಳಿ ಪ್ರಾರಂಭಿಸಿದ್ದಾರೆ. ವಿದ್ಯಾರ್ಥಿಗಳು ಸುಮಾರು 200ಕ್ಕೂ ಹೆಚ್ಚು ಪತ್ರಗಳನ್ನು ಅಂಚೆಯ ಮೂಲಕ ರವಾನಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಹಾಗೂ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಕನ್ನಡದಲ್ಲಿ ಪತ್ರಗಳನ್ನು ಕಳುಹಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಹಿಂದಿ ಮತ್ತು ಇಂಗ್ಲಿಷ್ ಭಾಷೆಯಲ್ಲಿ ಬೇಡ್ತಿ ನದಿ ತಿರುವು ಯೋಜನೆ ವಿರೋಧಿಸಿ ಪತ್ರ ಕಳಿಸಿದ್ದಾರೆ. ಇದಕ್ಕೆ ಭಾರತೀಯ ಕಿಸಾನ್ ಸಂಘ ಸಂಚಾಲಕ ನರಸಿಂಹಮೂರ್ತಿ ಸಹಕರಿಸಿದರು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language