
ವಿಜಯಪುರ, ನ.9: ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಗಳಲ್ಲಿ ಪ್ರಮುಖವಾದ ಶಕ್ತಿ ಯೋಜನೆಯಡಿ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶವಿದೆ. ಆದರೆ, ವಿಜಯಪುರ ಜಿಲ್ಲೆಯ ಗಡಿಭಾಗದ ಮಹಿಳೆಯರಿಗೆ ಈ ಯೋಜನೆ ಲಭ್ಯವಾಗುತ್ತಿಲ್ಲ ಎಂಬುದು ಬೆಳಕಿಗೆ ಬಂದಿದೆ. ವಿಜಯಪುರ ಮಹಾರಾಷ್ಟ್ರದ ಗಡಿ ಭಾಗವನ್ನು ಹೊಂದಿಕೊಂಡಿರುವ ಜಿಲ್ಲೆಯಾಗಿದ್ದು, ವಿಜಯಪುರದಿಂದ ಮಹಾರಾಷ್ಟ್ರದ ಸೊಲ್ಲಾಪುರ, ಸಾಂಗ್ಲಿ ಮತ್ತು ಮಿರಜ್ ಕಡೆಗೆ ಸಂಚರಿಸುವ ಅಂತರರಾಜ್ಯ ಬಸ್‌ಗಳಲ್ಲಿ ರಾಜ್ಯದ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡದಂತೆ ಸರ್ಕಾರ ಆದೇಶಿಸಿದೆ. ಇದರ ಪರಿಣಾಮವಾಗಿ, ಹೊರ್ತಿ, ಝಳಕಿ, ಧೂಳಖೇಡ ಸೇರಿದಂತೆ ಹಲವು ಗ್ರಾಮಗಳ ಮಹಿಳೆಯರು ನಿತ್ಯ ಹಣ ಪಾವತಿಸಿ ಪ್ರಯಾಣಿಸಬೇಕಾದ ಅನಿವಾರ್ಯತೆ ಇದೆ. ಈ ಭಾಗದ ಮಹಿಳೆಯರು “ಇಡೀ ರಾಜ್ಯದ ಮಹಿಳೆಯರಿಗೆ ಶಕ್ತಿ ಯೋಜನೆ ಜಾರಿಯಾಗಿದ್ದರೆ ನಾವೇನು ಪಾಪ ಮಾಡಿದ್ದೀವಿ?” ಎಂದು ಪ್ರಶ್ನಿಸುತ್ತಿದ್ದಾರೆ. ಸರ್ಕಾರ ಅಧಿಕಾರಕ್ಕೆ ಬಂದು ಮೂರೂವರೆ ವರ್ಷವಾದರೂ ತಮ್ಮ ಸಮಸ್ಯೆಗೆ ಪರಿಹಾರ ಸಿಕ್ಕಿಲ್ಲ ಎಂದು ಅಳಲು ತೋಡಿಕೊಂಡಿದ್ದಾರೆ. ಅಂತರರಾಜ್ಯ ಬಸ್‌ಗಳಿಗೂ ಶಕ್ತಿ ಯೋಜನೆಯನ್ನು ವಿಸ್ತರಿಸುವ ಅಥವಾ ಸ್ಥಳೀಯ ಸಾರಿಗೆ ಬಸ್‌ಗಳ ವ್ಯವಸ್ಥೆ ಮಾಡುವಂತೆ ಮಹಿಳೆಯರು ಸರ್ಕಾರ, ಸಾರಿಗೆ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Source: TV9 Kannada National
