Hashtagintro

ಬಳ್ಳಾರಿ ಲಕ್ಷ್ಮೀ ಪೂಜೆ ಲೈಂಗಿಕ ದೌರ್ಜನ್ಯ ಪ್ರಕರಣ: ಶ್ರೀಶೈಲಂನಲ್ಲಿ ಕಿಂಗ್‌ಪಿನ್ ಅರೆಸ್ಟ್!

ಬಳ್ಳಾರಿ ಲಕ್ಷ್ಮೀ ಪೂಜೆ ಲೈಂಗಿಕ ದೌರ್ಜನ್ಯ ಪ್ರಕರಣ: ಶ್ರೀಶೈಲಂನಲ್ಲಿ ಕಿಂಗ್‌ಪಿನ್ ಅರೆಸ್ಟ್!

ಬಳ್ಳಾರಿ, ನವೆಂಬರ್ 24: ಜಿಲ್ಲೆಯಲ್ಲಿ 2 ವಾರಗಳ ಹಿಂದೆ ಲಕ್ಷ್ಮೀ ಪೂಜೆ ಹೆಸರಿನಲ್ಲಿ ಯುವತಿಯರನ್ನು ನಂಬಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ತಕ್ಷಣವೇ ಕಾರ್ಯಾಚರಣೆ ನಡೆಸಿದ ಅಕ್ಕ ಪಡೆ 11 ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿತ್ತು. ಇದೀಗ ಪ್ರಮುಖ ಆರೋಪಿ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಆಂಧ್ರಪ್ರದೇಶದ ಶ್ರೀಶೈಲಂನಲ್ಲಿ ಕಾರ್ಯಾಚರಣೆ ನಡೆಸಿದ ಬಳ್ಳಾರಿ ಪೊಲೀಸರು, ಪ್ರಕರಣದ ಕಿಂಗ್‌ಪಿನ್ ಕಮ್ಮಾರ ಕೃಷ್ಣಮಾಚಾರಿಯನ್ನು ಬಂಧಿಸಿ ಬಳ್ಳಾರಿಗೆ ಕರೆತಂದಿದ್ದಾರೆ.

ಕೊನೆಗೂ ಸೆರೆಯಾದ ಅರ್ಚಕ

ಬಳ್ಳಾರಿಯಲ್ಲಿ ಲಕ್ಷ್ಮೀ ಪೂಜೆ ಹೆಸರಿನಲ್ಲಿ ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಕಮ್ಮಾರ ಕೃಷ್ಣಮಾಚಾರಿ (47) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆಂಧ್ರಪ್ರದೇಶದ ಅನಂತಪುರ ಸಮೀಪದ ಆಕತೋಟಪಲ್ಲಿಯ ಮಹಾಕಾಳಿ ದೇವಸ್ಥಾನದ ಅರ್ಚಕನಾಗಿರುವ ಈತ, ಶ್ರೀಶೈಲಂನಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಬಳಿಕ ಆರೋಪಿಯನ್ನು ಬಳ್ಳಾರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.

ಕನ್ಯೆಯರೇ ಟಾರ್ಗೆಟ್, ಹಣದ ಮಳೆಯ ಆಮಿಷ!

ಆರೋಪಿ ಕೃಷ್ಣಮಾಚಾರಿ ಯುವತಿಯರನ್ನು ಗುರಿಯಾಗಿಸಿಕೊಂಡು ವಿಶೇಷ ತಂತ್ರ ಅನುಸರಿಸುತ್ತಿದ್ದ ಎನ್ನಲಾಗಿದೆ. ಕೈ ಮತ್ತು ಕಾಲುಗಳ ಮೇಲೆ ಯಾವುದೇ ಕಲೆಗಳಿಲ್ಲದ ಕನ್ಯೆಯರು ಲಕ್ಷ್ಮೀ ಪೂಜೆ ಮಾಡಿದರೆ ಹಣದ ಮಳೆಯಾಗುತ್ತದೆ ಎಂದು ನಂಬಿಸುತ್ತಿದ್ದ. ಈ ಮೂಲಕ ಅಮಾಯಕ ಯುವತಿಯರನ್ನು ತನ್ನ ಬಲೆಗೆ ಬೀಳಿಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎನ್ನಲಾಗಿದೆ. ಅಷ್ಟೇ ಅಲ್ಲದೆ, ಯುವತಿಯರ ಬೆತ್ತಲೆ ಫೋಟೋ ಮತ್ತು ವಿಡಿಯೋಗಳನ್ನು ಮಾಡಿಸಿ ವಂಚಿಸುತ್ತಿದ್ದ ಆರೋಪವೂ ಈತನ ಮೇಲಿದೆ.

ಇದನ್ನೂ ಓದಿ ಲಕ್ಷ್ಮೀ ಪೂಜೆ ಹೆಸರಿನಲ್ಲಿ ಹೈಟೆಕ್ ವೇಶ್ಯಾವಾಟಿಕೆ ಜಾಲ! 11 ಆರೋಪಿಗಳ ಬಂಧನ, ನಾಲ್ವರು ಯುವತಿಯರ ರಕ್ಷಣೆ

ಅಕ್ಕ ಪಡೆ ಪೊಲೀಸರ ಕಾರ್ಯಾಚರಣೆಗೆ ಯಶಸ್ಸು

ಬಳ್ಳಾರಿಯ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವತಿಯರನ್ನು ಈ ಕೃತ್ಯಕ್ಕೆ ಬಳಸಿಕೊಳ್ಳಲು ಯತ್ನಿಸಿದ ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಬಳ್ಳಾರಿ ಎಸ್‌ಪಿ ಡಾ. ಸುಮನ್ ಡಿ. ಪೆನ್ನೇಕರ್ ಅವರ ನಿರ್ದೇಶನದಂತೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದರು. ಅಕ್ಕ ಪಡೆ ಮಹಿಳಾ ಪೊಲೀಸ್ ಸಿಬ್ಬಂದಿಯೇ ಯುವತಿಯರ ವೇಷ ಧರಿಸಿ ಖುದ್ದಾಗಿ ಕಾರ್ಯಾಚರಣೆಗೆ ಇಳಿದು ಆರೋಪಿಯ ಪತ್ತೆಗೆ ಸಹಕರಿಸಿದ್ದರು. ಇದೀಗ ಪ್ರಮುಖ ಆರೋಪಿಯ ಬಂಧನದೊಂದಿಗೆ ತನಿಖೆಗೆ ಮತ್ತಷ್ಟು ವೇಗ ಸಿಕ್ಕಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ ಒಟ್ಟು 15 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಕ್ಕ ಪಡೆ ಮಹಿಳಾ ಪೊಲೀಸ್ ಸಿಬ್ಬಂದಿಯ ಕಾರ್ಯಕ್ಕೆ ಎಸ್‌ಪಿ ಅಭಿನಂದನೆ ಸಲ್ಲಿಸಿದ್ದಾರೆ. ಪ್ರಕರಣದ ಕುರಿತು ಬಳ್ಳಾರಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜಾಲದ ಇತರ ಆಯಾಮಗಳ ಬಗ್ಗೆಯೂ ತನಿಖೆ ಮುಂದುವರಿದಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language