
ಬೆಂಗಳೂರು, ಅಕ್ಟೋಬರ್ 31: ಬೆಂಗಳೂರಿನ ಸುಚಿತ್ರ ಅಕಾಡೆಮಿಯಲ್ಲಿ ನಾಟಕ ಪ್ರದರ್ಶನದ ವೇಳೆ ಹೈಡ್ರಾಮಾ ನಡೆದಿದೆ. ‘ಗಾಂಧಿ ಹತ್ಯೆಯ ಸತ್ಯ’ ನಾಟಕ ಪ್ರದರ್ಶನ ವೇಳೆ ಗಾಂಧಿ ವಿರುದ್ಧ ಆಕ್ಷೇಪಾರ್ಹ ಪದಬಳಕೆ ಹಿನ್ನೆಲೆ ಆಕ್ರೋಶ ವ್ಯಕ್ತವಾಗಿದೆ. ಗಾಂಧಿ ದೇಶದ್ರೋಹಿ ಎಂದು ಸಂಭಾಷಣೆ ಕೇಳಿ ಆಕ್ರೋಶಗೊಂಡ ಕಾಂಗ್ರೆಸ್ ಕಾರ್ಯಕರ್ತರು ರೊಚ್ಚಿಗೆದ್ದು ನಾಟಕಕ್ಕೆ ಅಡ್ಡಿ ಪಡಿಸಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ನಾಟಕದ ನಿರ್ದೇಶಕ ಅಡ್ಡಂಡ ಕಾರ್ಯಪ್ಪನವರಿಗೆ ಮಸಿ ಬಳಿಯಲಾಗಿದೆ. ಬನಶಂಕರಿ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರು ದಾಖಲಾಗಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Source: TV9 Kannada National
