Hashtagintro

ಭಾರತ-ನ್ಯೂಜಿಲೆಂಡ್ ಪಂದ್ಯ ಮಿಸ್ ಮಾಡಿಕೊಳ್ಳಬೇಡಿ; ಉಚಿತವಾಗಿ ನೋಡುವ ಅವಕಾಶ ಇಲ್ಲಿದೆ

ಭಾರತ-ನ್ಯೂಜಿಲೆಂಡ್ ಪಂದ್ಯ ಮಿಸ್ ಮಾಡಿಕೊಳ್ಳಬೇಡಿ; ಉಚಿತವಾಗಿ ನೋಡುವ ಅವಕಾಶ ಇಲ್ಲಿದೆ

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಏಕದಿನ ಸರಣಿಯ ಮೂರನೇ ಪಂದ್ಯ ನವೆಂಬರ್ 10ರಂದು ಹ್ಯಾಮಿಲ್ಟನ್‌ನ ಸೆಡ್ಡನ್ ಪಾರ್ಕ್‌ನಲ್ಲಿ ನಡೆಯಲಿದೆ. ಈಗಾಗಲೇ ಸರಣಿಯ ಮೊದಲ ಎರಡು ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ 2-0 ಮುನ್ನಡೆಯಲ್ಲಿದೆ. ಹೀಗಾಗಿ ಮೂರನೇ ಪಂದ್ಯವನ್ನೂ ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಉತ್ಸಾಹದಲ್ಲಿ ಭಾರತ ತಂಡವಿದೆ. ಆದರೆ, ಈ ಪಂದ್ಯಕ್ಕೆ ಮಳೆಯ ಭೀತಿ ಎದುರಾಗಿದೆ. ಹಾಗಾದರೆ ಈ ಪಂದ್ಯವನ್ನು ಯಾವಾಗ, ಎಲ್ಲಿ ಮತ್ತು ಹೇಗೆ ಉಚಿತವಾಗಿ ವೀಕ್ಷಿಸಬಹುದು ಎಂಬ ಮಾಹಿತಿ ಇಲ್ಲಿದೆ.

ಭಾರತದ ದಾಖಲೆ ಹೇಗಿದೆ?

ಹ್ಯಾಮಿಲ್ಟನ್‌ನ ಸೆಡ್ಡನ್ ಪಾರ್ಕ್ ಮೈದಾನದಲ್ಲಿ ಟೀಂ ಇಂಡಿಯಾದ ಏಕದಿನ ದಾಖಲೆಯೇನೂ ಅಷ್ಟೊಂದು ಉತ್ತಮವಾಗಿಲ್ಲ. ಕಳೆದ 10 ವರ್ಷಗಳಿಂದ ಈ ಮೈದಾನದಲ್ಲಿ ಭಾರತ ತಂಡ ಒಂದೇ ಒಂದು ಏಕದಿನ ಪಂದ್ಯವನ್ನೂ ಗೆದ್ದಿಲ್ಲ. ಕೊನೆಯ ಬಾರಿಗೆ 2015ರಲ್ಲಿ ಇಲ್ಲಿ ಭಾರತ ಗೆಲುವು ಸಾಧಿಸಿತ್ತು. ಒಟ್ಟಾರೆಯಾಗಿ ಈ ಮೈದಾನದಲ್ಲಿ ಭಾರತ 12 ಏಕದಿನ ಪಂದ್ಯಗಳನ್ನು ಆಡಿದ್ದು, ಕೇವಲ ಮೂರು ಪಂದ್ಯಗಳಲ್ಲಿ ಮಾತ್ರ ಗೆಲುವು ಕಂಡಿದೆ. ಮತ್ತೊಂದೆಡೆ, ನ್ಯೂಜಿಲೆಂಡ್ ತಂಡ ಕಳೆದ ಒಂಬತ್ತು ವರ್ಷಗಳಿಂದ ಈ ಮೈದಾನದಲ್ಲಿ ತನ್ನ ಪ್ರಾಬಲ್ಯ ಮುಂದುವರಿಸಿದೆ. 2017ರಿಂದ ಇಲ್ಲಿ ನಡೆದ ಏಕದಿನ ಪಂದ್ಯಗಳಲ್ಲಿ ಕಿವೀಸ್ ತಂಡ ಸೋಲು ಕಂಡಿಲ್ಲ.

ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಯಾವಾಗ ನಡೆಯಲಿದೆ?

ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ನವೆಂಬರ್ 10ರ ಮಂಗಳವಾರ ನಡೆಯಲಿದೆ.

ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಎಲ್ಲಿ ನಡೆಯಲಿದೆ?

ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯ ಹ್ಯಾಮಿಲ್ಟನ್‌ನ ಸೆಡ್ಡನ್ ಪಾರ್ಕ್ ಮೈದಾನದಲ್ಲಿ ನಡೆಯಲಿದೆ.

ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದ ಟಾಸ್ ಎಷ್ಟು ಗಂಟೆಗೆ?

ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದ ಟಾಸ್ ಭಾರತೀಯ ಕಾಲಮಾನ ಪ್ರಕಾರ ಬೆಳಗ್ಗೆ 7 ಗಂಟೆಗೆ ನಡೆಯಲಿದೆ.

ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದ ನೇರಪ್ರಸಾರವನ್ನು ಎಲ್ಲಿ ವೀಕ್ಷಿಸಬಹುದು?

ಭಾರತ-ನ್ಯೂಜಿಲೆಂಡ್ ನಡುವಿನ ಮೂರನೇ ಏಕದಿನ ಪಂದ್ಯದ ನೇರಪ್ರಸಾರವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್‌ನ ವಾಹಿನಿಗಳಲ್ಲಿ ವೀಕ್ಷಿಸಬಹುದು. ಹಾಗೆಯೇ ಪಂದ್ಯದ ಲೈವ್ ಸ್ಟ್ರೀಮಿಂಗ್ ಸೋನಿ ಲಿವ್ ಆ್ಯಪ್ ಮತ್ತು ವೆಬ್‌ಸೈಟ್‌ನಲ್ಲಿ ಲಭ್ಯವಿರಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source: TV9 Kannada Sports

Read full article on TV9 Kannada Sports

Leave a Comment

Your email address will not be published. Required fields are marked *

समाचार की भाषा चुनें / Choose News Language