Hashtagintro

ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಕೋಚಿಂಗ್

ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆ: ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತ ಕೋಚಿಂಗ್

ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ನಿರುದ್ಯೋಗಿ ಯುವಜನತೆಗೆ ರಾಜ್ಯ ಸರ್ಕಾರವು ಬಂಪರ್ ಕೊಡುಗೆಯೊಂದನ್ನು ನೀಡಿದೆ. ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುತ್ತಿರುವ ಅರ್ಹ ಅಭ್ಯರ್ಥಿಗಳಿಗೆ ಸಂಪೂರ್ಣ ಉಚಿತ ಆನ್‌ಲೈನ್ ತರಬೇತಿ (Free Online Training) ನೀಡಲು ‘ಮುಖ್ಯಮಂತ್ರಿ ವಿದ್ಯಾರ್ಥಿ ಸಹಾಯ ಹಸ್ತ ಯೋಜನೆ’ಯ ಅಡಿಯಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ದುಬಾರಿ ಬೆಲೆಯ ಕೋಚಿಂಗ್ ಸೆಂಟರ್‌ಗಳಿಗೆ ತೆರಳಿ ತರಬೇತಿ ಪಡೆಯಲು ಸಾಧ್ಯವಾಗದ ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳಿಗೆ ಉಚಿತ ಸೇವೆಯನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.

ಯಾವೆಲ್ಲಾ ಪರೀಕ್ಷೆಗಳಿಗೆ ಉಚಿತ ತರಬೇತಿ ಲಭ್ಯ?

ಈ ಯೋಜನೆಯಡಿ ಅಭ್ಯರ್ಥಿಗಳು ರಾಜ್ಯದ ಪ್ರಮುಖ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ಸಿದ್ಧತೆ ನಡೆಸಬಹುದಾಗಿದೆ. KPSC ಗೆಜೆಟೆಡ್ ಪ್ರೊಬೇಷನರ್ಸ್ (ಗ್ರೂಪ್ A ಮತ್ತು B), ಎಫ್‌ಡಿಎ (FDA), ಎಸ್‌ಡಿಎ (SDA), ಪಿಡಿಒ (PDO), ಪೋಲಿಸ್ ಸಬ್ ಇನ್ಸ್ಪೆಕ್ಟರ್ (PSI), ಪೋಲಿಸ್ ಕಾನ್ಸ್ಟೇಬಲ್, ಗ್ರಾಮ ಆಡಳಿತಾಧಿಕಾರಿ (VAO) ಮತ್ತು ಗ್ರೂಪ್-C ಸೇರಿದಂತೆ ವಿವಿಧ ಹುದ್ದೆಗಳ ಪರೀಕ್ಷೆಗಳಿಗೆ ಸರ್ಕಾರದ ವತಿಯಿಂದಲೇ ಉಚಿತ ಆನ್‌ಲೈನ್ ತರಬೇತಿ ನೀಡಲಾಗುತ್ತದೆ.

ಉನ್ನತ ಮಟ್ಟದ ಬೋಧನೆ ಮತ್ತು ಮೂರು ಪರೀಕ್ಷೆಗಳ ಆಯ್ಕೆ:

ಸ್ಪರ್ಧಾತ್ಮಕ ಪರೀಕ್ಷೆಗಳ ಕ್ಷೇತ್ರದಲ್ಲಿ ಸುದೀರ್ಘ ಅನುಭವ ಹೊಂದಿರುವ ಪರಿಣಿತ ಉಪನ್ಯಾಸಕರಿಂದ ಅತ್ಯುನ್ನತ ಗುಣಮಟ್ಟದ ಆನ್‌ಲೈನ್ ತರಗತಿಗಳನ್ನು ನೀಡಲಾಗುತ್ತದೆ. ತರಗತಿಗಳ ಜೊತೆಗೆ ವಿದ್ಯಾರ್ಥಿಗಳಿಗೆ ಅತ್ಯುತ್ತಮ ಅಧ್ಯಯನ ಸಾಮಗ್ರಿಗಳು (Study Materials) ಮತ್ತು ಪರೀಕ್ಷಾ ಎದುರಿಸುವ ಧೈರ್ಯ ತುಂಬಲು ಅಣಕು ಪರೀಕ್ಷೆಗಳು (Mock Tests) ಸಹ ಲಭ್ಯವಿರಲಿವೆ. ಈ ಯೋಜನೆಯ ಮತ್ತೊಂದು ವಿಶೇಷತೆಯೆಂದರೆ, ಪ್ರತಿಯೊಬ್ಬ ಅಭ್ಯರ್ಥಿಯು ತಮ್ಮ ಆಸಕ್ತಿಗೆ ಅನುಗುಣವಾಗಿ ಗರಿಷ್ಠ ಮೂರು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಏಕಕಾಲದಲ್ಲಿ ಆಯ್ಕೆ ಮಾಡಿಕೊಂಡು ತರಬೇತಿ ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಅರ್ಹತೆಗಳು ಮತ್ತು ಅರ್ಜಿ ಸಲ್ಲಿಕೆ ವಿಧಾನ:

ಕರ್ನಾಟಕದ ಖಾಯಂ ನಿವಾಸಿಗಳು ಹಾಗೂ ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪದವಿ (Graduation) ಪೂರ್ಣಗೊಳಿಸಿದ ಅಭ್ಯರ್ಥಿಗಳು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ರಾಜ್ಯ ಸರ್ಕಾರದ ‘Seva One’ ಅಧಿಕೃತ ಪೋರ್ಟಲ್ (sevaone.karnataka.gov.in) ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ನೋಂದಣಿ ಮಾಡಿಕೊಂಡು ಅರ್ಜಿ ಸಲ್ಲಿಸಬೇಕಾಗುತ್ತದೆ. ಅರ್ಜಿ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಮುಂದಿನ ಉಲ್ಲೇಖ ಹಾಗೂ ಪರಿಶೀಲನೆಗಾಗಿ ಅರ್ಜಿಯ ಪ್ರತಿಯನ್ನು (Application Printout) ಸುರಕ್ಷಿತವಾಗಿಟ್ಟುಕೊಳ್ಳುವುದು ಕಡ್ಡಾಯವಾಗಿದೆ.

ಸಹಾಯವಾಣಿ ಸಂಖ್ಯೆ ಮತ್ತು ಸಂಪರ್ಕ ವಿವರ:

ಅರ್ಜಿ ಸಲ್ಲಿಕೆಗೆ ಸಂಬಂಧಿಸಿದಂತೆ ಯಾವುದೇ ತಾಂತ್ರಿಕ ತೊಂದರೆಗಳು, ಸಂದೇಹಗಳು ಇದ್ದಲ್ಲಿ ಅಥವಾ ಹೆಚ್ಚಿನ ಮಾಹಿತಿ ಪಡೆಯಲು ಅಭ್ಯರ್ಥಿಗಳು ಇಲಾಖೆಯ ಅಧಿಕೃತ ಸಹಾಯವಾಣಿ ಸಂಖ್ಯೆ 080-24410574 ಸೋಮವಾರದಿಂದ ಶನಿವಾರದ ವರೆಗೆ ಬೆಳಿಗ್ಗೆ 10:00 ರಿಂದ ಸಂಜೆ 06:00 ರವರೆಗೆ ಸಂಪರ್ಕಿಸಬಹುದು.

ಉದ್ಯೋಗಕ್ಕೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Source: TV9 Kannada Education

Read full article on TV9 Kannada Education

Leave a Comment

Your email address will not be published. Required fields are marked *

समाचार की भाषा चुनें / Choose News Language