
ರಣ್ಬೀರ್ ಕಪೂರ್, ಸಾಯಿ ಪಲ್ಲವಿ ಹಾಗೂ ಯಶ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ರಾಮಾಯಣ’ ಸಿನಿಮಾ ಬಿಡುಗಡೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ನಿತೇಶ್ ತಿವಾರಿ ನಿರ್ದೇಶನದ ಈ ಸಿನಿಮಾ ಬಿಡುಗಡೆಗೂ ಮುನ್ನವೇ ಅಡ್ವಾನ್ಸ್ ಬುಕಿಂಗ್ನಲ್ಲಿ ಧೂಳೆಬ್ಬಿಸುತ್ತಿದೆ. ಬಾಕ್ಸ್ ಆಫೀಸ್ನಲ್ಲಿ ಮೊದಲ ದಿನವೇ ‘ಧುರಂಧರ್ 2’ ಸಿನಿಮಾ ಮಾಡಿದ್ದ ದಾಖಲೆಯನ್ನು ಈ ಸಿನಿಮಾ ಉಡೀಸ್ ಮಾಡುವ ಲಕ್ಷಣಗಳು ಸ್ಪಷ್ಟವಾಗಿ ಗೋಚರಿಸುತ್ತಿವೆ.
ದೀಪಾವಳಿ ಹಬ್ಬದ ಪ್ರಯುಕ್ತ ನವೆಂಬರ್ 5ರಂದು ‘ರಾಮಾಯಣ’ ಪ್ರಪಂಚದಾದ್ಯಂತ ತೆರೆಕಾಣಲಿದೆ. ಪ್ರಮುಖ ಟ್ರೇಡ್ ವಿಶ್ಲೇಷಣೆಗಳ ಪ್ರಕಾರ ಚಿತ್ರವು ಈಗಾಗಲೇ 20 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಮಾಡಿದೆ. ದೇಶಾದ್ಯಂತ ಸಾವಿರಾರು ಶೋಗಳು ಹೌಸ್ಫುಲ್ ಆಗಿದೆ. ಹಬ್ಬದ ರಜಾದಿನಗಳಲ್ಲಿ ಶೋಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಲಿದೆ. ಸುಮಾರು 3 ಗಂಟೆ 15 ನಿಮಿಷಗಳ ರನ್ಟೈಮ್ ಹೊಂದಿರುವ ಈ ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ‘ಯು’ ಸರ್ಟಿಫಿಕೇಟ್ ಸಿಕ್ಕಿದೆ.
ಭಾರತದ ಮಾರುಕಟ್ಟೆಯಲ್ಲಿ ಹಿಂದಿ ಆವೃತ್ತಿಯಿಂದಲೇ ಭಾರಿ ಗಳಿಕೆಯ ನಿರೀಕ್ಷೆಯಿದೆ. ದೇಶೀಯವಾಗಿ ಒಟ್ಟು 110 ಕೋಟಿ ರೂಪಾಯಿಗೂ ಹೆಚ್ಚು ನೆಟ್ ಕಲೆಕ್ಷನ್ ಆಗುವ ಸಾಧ್ಯತೆಯಿದೆ. ಜಾಗತಿಕವಾಗಿ ಮೊದಲ ದಿನದ ಒಟ್ಟು ಕಲೆಕ್ಷನ್ 200 ಕೋಟಿ ರೂಪಾಯಿ ಗಡಿ ದಾಟುವ ನಿರೀಕ್ಷೆಯಿದೆ. ಇನ್ನು ವಿದೇಶಿ ಮಾರುಕಟ್ಟೆಯಲ್ಲೂ ಅಡ್ವಾನ್ಸ್ ಬುಕಿಂಗ್ ಮೂಲಕವೇ ಸಿನಿಮಾ ಕೋಟಿ ಕೋಟಿ ರೂಪಾಯಿ ಬಾಚಿಕೊಳ್ಳುತ್ತಿದೆ.
ರಣ್ಬೀರ್ ಕಪೂರ್ ನಟನೆಯ ‘ಅನಿಮಲ್’ ಸಿನಿಮಾ ಮೊದಲ ದಿನ 116 ಕೋಟಿ ರೂಪಾಯಿ ಗಳಿಸಿತ್ತು. ‘ರಾಮಾಯಣ’ ಸಿನಿಮಾ ‘ಅನಿಮಲ್’ ದಾಖಲೆಯನ್ನು ಸುಲಭವಾಗಿ ಮೀರಿಸಲಿದೆ. ಇನ್ನು, ‘ಧರುಂಧರ್ 2’ ಸಿನಿಮಾ ಮೊದಲ ದಿನ 226 ಕೋಟಿ ರೂಪಾಯಿ ಬಾಚಿಕೊಂಡಿತ್ತು. ಈ ದಾಖಲೆಯನ್ನು ಸಿನಿಮಾ ಮುರಿಯುವ ಸಾಧ್ಯತೆ ಇದೆ.
ಇದನ್ನೂ ಓದಿ: ‘ರಾಮಾಯಣ’ ಬೆನ್ನಲ್ಲೇ ಸಾಯಿ ಪಲ್ಲವಿ ಮತ್ತೊಂದು ಬಿಗ್ ಪ್ರಾಜೆಕ್ಟ್; ಐಪಿಎಸ್ ಆದ ನಟಿ
ನಿರ್ಮಾಪಕ ನಮಿತ್ ಮಲ್ಹೋತ್ರಾ ಈ ‘ರಾಮಾಯಣ’ದ ಎರಡು ಭಾಗಗಳನ್ನು ಬರೋಬ್ಬರಿ 4,000 ಕೋಟಿ ರೂಪಾಯಿ ಬಜೆಟ್ನಲ್ಲಿ ನಿರ್ಮಿಸುತ್ತಿದ್ದಾರೆ. ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಯಶಸ್ವಿ ಎನಿಸಿಕೊಳ್ಳಬೇಕಾದರೆ ಬೃಹತ್ ಮಟ್ಟದ ಗಳಿಕೆ ಮಾಡುವುದು ಅತ್ಯಗತ್ಯವಾಗಿದೆ. ರಣಬೀರ್ ಕಪೂರ್, ಸಾಯಿ ಪಲ್ಲವಿ, ಯಶ್ ನಟಿಸಿದ್ದಾರೆ. ಯಶ್ ಈ ಚಿತ್ರಕ್ಕೆ ನಿರ್ಮಾಪಕರೂ ಹೌದು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.
Source: TV9 Kannada Entertainment
