Hashtagintro

ರಜನಿಕಾಂತ್ ನಟನೆಯ ‘ಜೈಲರ್ 2’ ನೋಡಿ ಮನಸಾರೆ ಹೊಗಳಿದ ಅಲ್ಲು ಅರ್ಜುನ್

ರಜನಿಕಾಂತ್ ನಟನೆಯ ‘ಜೈಲರ್ 2’ ನೋಡಿ ಮನಸಾರೆ ಹೊಗಳಿದ ಅಲ್ಲು ಅರ್ಜುನ್

ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ‘ಜೈಲರ್ 2’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಸಖತ್ ಕಲೆಕ್ಷನ್ ಮಾಡುತ್ತಿದೆ. ಅಕ್ಟೋಬರ್ 15ರಂದು ವಿಶ್ವಾದ್ಯಂತ ಬಿಡುಗಡೆಯಾದ ಈ ಚಿತ್ರವು ಕೇವಲ ಮೊದಲ ವಾರದಲ್ಲೇ ಭಾರತೀಯ ಬಾಕ್ಸ್ ಆಫೀಸ್‌ನಲ್ಲಿ 300 ಕೋಟಿ ರೂಪಾಯಿಗೂ ಅಧಿಕ ನೆಟ್ ಕಲೆಕ್ಷನ್ ಮಾಡುವ ಮೂಲಕ ದಾಖಲೆ ಬರೆದಿದೆ. ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನದ ಈ ಸೀಕ್ವೆಲ್ 2026ರ ಅತಿ ಹೆಚ್ಚು ಗಳಿಕೆ ಮಾಡಿದ ತಮಿಳು ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಚಿತ್ರವನ್ನು ಇತ್ತೀಚೆಗೆ ವೀಕ್ಷಿಸಿದ ಟಾಲಿವುಡ್ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅವರು ಮೆಚ್ಚಿಕೊಂಡಿದ್ದಾರೆ. ತಮ್ಮ ಅಧಿಕೃತ ‘ಎಕ್ಸ್’ ಖಾತೆಯ ಮೂಲಕ ಸಿನಿಮಾ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ರಜನಿಕಾಂತ್ ಅವರ ಸ್ಲ್ಯಾಗ್ ಮತ್ತು ಸ್ಟಾರ್ ಪವರ್ ಬಗ್ಗೆ ಮುಕ್ತಕಂಠದಿಂದ ಕೊಂಡಾಡಿದ್ದಾರೆ.‘ಜೈಲರ್ 2 ನಿಜಕ್ಕೂ ರಜನಿಕಾಂತ್ ಸರ್ ಅವರ ಸ್ಟಾರ್ ಪವರ್, ಸ್ವಾಗ್​ನ ಅಸಲಿ ಪ್ರದರ್ಶನ. ಪ್ರೇಕ್ಷಕರನ್ನು ಸೀಟಿನಂಚಿನಲ್ಲಿ ಕೂರಿಸುವ ಭರ್ಜರಿ ಕಮರ್ಷಿಯಲ್ ಎಂಟರ್ಟೈನರ್ ಸಿನಿಮಾ ಇದು’ ಎಂದು ಬರೆದುಕೊಂಡಿದ್ದಾರೆ.

ಸಂಗೀತ ನಿರ್ದೇಶಕ ಅನಿರುದ್ಧ್ ರವಿಚಂದರ್ ಅವರ ಸಂಗೀತದ ಬಗ್ಗೆ ವಿಶೇಷ ಮೆಚ್ಚುಗೆ ವ್ಯಕ್ತಪಡಿಸಿರುವ ಅವರು, ‘ಸಹೋದರ ಅನಿರುದ್ಧ್ ಕೆಲಸ ಚೆನ್ನಾಗಿದೆ. ಎಲ್ಲಾ ಕಲಾವಿದರು, ತಂತ್ರಜ್ಞರು ಮತ್ತು ನಿರ್ಮಾಪಕರು ಈ ಚಿತ್ರಕ್ಕಾಗಿ ತಮ್ಮ ಸರ್ವಸ್ವವನ್ನೂ ಧಾರೆ ಎರೆದಿದ್ದಾರೆ. ಶೋಮ್ಯಾನ್ ನೆಲ್ಸನ್ ದಿಲೀಪ್ ಕುಮಾರ್ ಅತ್ಯಂತ ಕೂಲ್ ಆದ ಬ್ಲಾಕ್‌ಬಸ್ಟರ್ ಹಿಟ್ ನೀಡಿದ್ದಾರೆ’ ಎಂದು ಪ್ರಶಂಸಿಸಿದ್ದಾರೆ.

ಅಲ್ಲದೆ, ತೆಲುಗಿನಲ್ಲಿ ಟ್ವೀಟ್ ಮುಂದುವರಿಸಿದ ಅಲ್ಲು ಅರ್ಜುನ್ ಅವರು, ‘ಕೇವಲ ರಜನಿಕಾಂತ್ ಮಾತ್ರ ತಮ್ಮ ಶರ್ಟ್ ಹರಿಯಿಸಿಕೊಳ್ಳದೆ 500 ಕೋಟಿ ರೂಪಾಯಿ ಕ್ಲಬ್‌ಗೆ ಲೀಲಾಜಾಲವಾಗಿ ಕಾಲಿಡಬಲ್ಲವರು’ ಎಂದು ಹೊಗಳಿದ್ದಾರೆ. ‘ಸನ್ ಪಿಕ್ಚರ್ಸ್’ ತಂಡಕ್ಕೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಹೃತಿಕ್ ರೋಷನ್ 25 ಕೋಟಿ ರೂ. ಸಂಭಾವನೆ ಪಡೆದಿಲ್ಲವೇ? ‘ಜೈಲರ್ 2’ ಅತಿಥಿ ಪಾತ್ರದ ಬಗ್ಗೆ ಅಪ್‌ಡೇಟ್

‘ಜೈಲರ್ 2’ ಸಿನಿಮಾ ಭಾರತದಲ್ಲಿ ಸುಮಾರು 317.20 ಕೋಟಿ ರೂಪಾಯಿ ನೆಟ್ ಕಲೆಕ್ಷನ್ ಹಾಗೂ ವಿದೇಶಗಳಿಂದ 205 ಕೋಟಿ ರೂಪಾಯಿ ಬಾಚಿಕೊಳ್ಳುವ ಮೂಲಕ ಒಟ್ಟು ವಿಶ್ವಾದ್ಯಂತ 576.45 ಕೋಟಿ ರೂಪಾಯಿ ಗ್ರಾಸ್ ಗಳಿಕೆ ಮಾಡಿದೆ. ಈ ವರ್ಷ ಅತಿ ಹೆಚ್ಚು ಗಳಿಕೆ ಕಂಡ ಎರಡನೇ ಭಾರತೀಯ ಚಿತ್ರವಾಗಿ ಹೊರಹೊಮ್ಮಿದೆ. ಈ ಚಿತ್ರದಲ್ಲಿ ರಜನಿಕಾಂತ್ ಅವರು ಟೈಗರ್ ಮುತ್ತುವೇಲ್ ಪಾಂಡಿಯನ್ ಪಾತ್ರದಲ್ಲಿ ಮತ್ತೊಮ್ಮೆ ಅಬ್ಬರಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source: TV9 Kannada Entertainment

Read full article on TV9 Kannada Entertainment

Leave a Comment

Your email address will not be published. Required fields are marked *

समाचार की भाषा चुनें / Choose News Language