
ಬೆಂಗಳೂರು, (ನವೆಂಬರ್ 02): ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧದ ಸ್ಟಿಂಗ್ ಆಪರೇಷನ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ಹೆಸರು ಕೇಳಿಬಂದಿದ್ದು, ಭಾರೀ ಸಂಚಲನಕ್ಕೆ ಕಾರಣವಾಗಿದೆ. ಇದರ ನಡುವೆ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿಬಂದ ವ್ಯಕ್ತಿಗೆ ಜಾಮೀನು ಸಿಕ್ಕಿದೆ. ಹೌದು..ಕಾಂಗ್ರೆಸ್ನಿಂದ ಅಮಾನತುಗೊಂಡಿರುವ ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಗೂ ಬೆಂಗಳೂರಿನ 66ನೇ ಸಿಸಿಹೆಚ್ ಕೋರ್ಟ್ ಮಧ್ಯಂತರ ಜಾಮೀನು ನೀಡಿ ಆದೇಶ ಹೊರಡಿಸಿದೆ.
ಸ್ಟಿಂಗ್ ಆಪರೇಷನ್ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯನವರು ದೂರು ನೀಡಿದ್ದು, ಈ ದೂರಿನ ಅನ್ವಯ ಸಿಸಿಬಿ ಪೊಲೀಸರು, ಕೃಪಾ ಆಳ್ವಾ, ವಿನೋದ್ ಕುಮಾರ್ ಹಾಗೂ ಪ್ರಶಾಂತ್ ಕುಮಾರ್ ಸೇರಿದಂತೆ ಹಲವರನ್ನು ವಿಚಾರಣೆಗೊಳಪಡಿಸಿ ಕೆಲ ಮಾಹಿತಿಯನ್ನು ಕಲೆ ಹಾಕಿದ್ದಾರೆ. ಆದ್ರೆ, ಬಂಧನದ ಭೀತಿ ಹಿನ್ನೆಲೆಯಲ್ಲಿ ಈ ಮೂವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ಸಮ್ಮತಿಸಿದ್ದು,ಪೊಲೀಸರ ತನಿಖೆಗೆ ಸಹಕರಿಸಬೇಕು ಹಾಗೇ ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದೆ.
Source: TV9 Kannada National
