Hashtagintro

ಸಿರಾಜ್ ಇನ್… ಟೀಮ್ ಇಂಡಿಯಾದಿಂದ ಯಾರು ಹೊರಗೆ?

ಸಿರಾಜ್ ಇನ್… ಟೀಮ್ ಇಂಡಿಯಾದಿಂದ ಯಾರು ಹೊರಗೆ?

ಭಾರತ ಮತ್ತು ನ್ಯೂಝಿಲೆಂಡ್ ನಡುವಣ ಮೂರನೇ ಏಕದಿನ ಪಂದ್ಯ ನಾಳೆ (ನ.10) ನಡೆಯಲಿದೆ. ಹ್ಯಾಮಿಲ್ಟನ್​ನ ಸೇಡನ್ ಪಾರ್ಕ್​ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ತನ್ನ ಪ್ಲೇಯಿಂಗ್ ಇಲೆವೆನ್​ನಲ್ಲಿ ಒಂದು ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆಯಿದೆ.

ಏಕೆಂದರೆ ನ್ಯೂಝಿಲೆಂಡ್ ವಿರುದ್ಧದ ಕಳೆದ ಎರಡು ಏಕದಿನ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪರ ಮೊಹಮ್ಮದ್ ಸಿರಾಜ್ ಕಣಕ್ಕಿಳಿದಿರಲಿಲ್ಲ. ಇದೀಗ ಅವರು ಭಾರತ ಎ ತಂಡದ ಪರ ಕೆಂಪು ಚೆಂಡಿನ ಕರ್ತವ್ಯ ಮುಗಿಸಿ  ಭಾರತ ತಂಡವನ್ನು ಕೂಡಿಕೊಂಡಿದ್ದಾರೆ. ಹೀಗಾಗಿ, ಅವರಿಗೆ ಆಡುವ ಬಳಗದಲ್ಲಿ ಅವಕಾಶ ಕಲ್ಪಿಸುವ ಸಲುವಾಗಿ ಜಮ್ಮು-ಕಾಶ್ಮೀರದ ಯುವ ವೇಗಿ ಆಖಿಬ್ ನಬಿ ಅವರನ್ನು ತಂಡದಿಂದ ಹೊರಗಿಡುವ ಸಾಧ್ಯತೆಯಿದೆ. ಈ ಒಂದು ಪ್ರಮುಖ ಬದಲಾವಣೆಯೊಂದಿಗೆ ಟೀಮ್ ಇಂಡಿಯಾ ಮೂರನೇ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವುದನ್ನು ಎದುರು ನೋಡಬಹುದು.

ಅದರಂತೆ ಟೀಮ್ ಇಂಡಿಯಾ ಪರ ಆರಂಭಿಕರಾಗಿ ರೋಹಿತ್ ಶರ್ಮಾ ಹಾಗೂ ನಾಯಕ ಶುಭ್​ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ. ಇನ್ನು ಮೂರನೇ ಕ್ರಮಾಂಕ ವಿರಾಟ್ ಕೊಹ್ಲಿಗೆ ಖಾಯಂ. ನಾಲ್ಕನೇ ಸ್ಥಾನದಲ್ಲಿ ಶ್ರೇಯಸ್ ಅಯ್ಯರ್ ಆಡಿದರೆ, ವಿಕೆಟ್ ಕೀಪರ್ ಬ್ಯಾಟರ್ ಜವಾಬ್ದಾರಿಯೊಂದಿಗೆ ಕೆಎಲ್ ರಾಹುಲ್ ಐದನೇ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಆಲ್​ರೌಂಡರ್​ಗಳಾಗಿ ನಮನ್ ಧೀರ್ ಹಾಗೂ ಅಕ್ಷರ್ ಪಟೇಲ್ ಟೀಮ್ ಇಂಡಿಯಾ ಪ್ಲೇಯಿಂಗ್ ಇಲೆವೆನ್​ನಲ್ಲಿ ಇರಲಿದ್ದಾರೆ. ಇನ್ನು ಬೌಲರ್​ಗಳಾಗಿ ಮೊಹಮ್ಮದ್ ಸಿರಾಜ್, ಅನ್ಶುಕ್ ಕಂಬೋಜ್, ಅರ್ಷದೀಪ್ ಸಿಂಗ್ ಹಾಗೂ ಗುರ್ನೂರ್ ಬ್ರಾರ್ ಅಡುವ ಬಳಗದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅದರಂತೆ ಟೀಮ್ ಇಂಡಿಯಾದ ಸಂಭಾವ್ಯ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…

  1. ಶುಭ್​ಮನ್ ಗಿಲ್ (ನಾಯಕ)
  2. ರೋಹಿತ್ ಶರ್ಮಾ
  3. ವಿರಾಟ್ ಕೊಹ್ಲಿ
  4. ಶ್ರೇಯಸ್ ಅಯ್ಯರ್
  5. ಕೆಎಲ್ ರಾಹುಲ್ (ವಿಕೆಟ್ ಕೀಪರ್)
  6. ಅಕ್ಷರ್ ಪಟೇಲ್
  7. ನಮನ್​ ಧೀರ್
  8. ಮೊಹಮ್ಮದ್ ಸಿರಾಜ್
  9. ಅರ್ಷದೀಪ್ ಸಿಂಗ್
  10. ಗುರ್ನೂರ್ ಬ್ರಾರ್
  11. ಅನ್ಶುಲ್ ಕಂಬೋಜ್.

ಇದನ್ನೂ ಓದಿ: ಟೀಮ್ ಇಂಡಿಯಾ ಪ್ರವಾಸವಿಲ್ಲ… ಇಂಗ್ಲೆಂಡ್​ಗೆ 627 ಕೋಟಿ ರೂ. ನಷ್ಟದ ಭೀತಿ!

ಭಾರತದ ಏಕದಿನ ತಂಡ: ಶುಭ್​ಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ (ಉಪನಾಯಕ), ಕೆಎಲ್ ರಾಹುಲ್ (ವಿಕೆಟ್ ಕೀಪರ್), ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ನಮನ್ ಧೀರ್, ಅನ್ಶುಲ್ ಕಂಬೋಜ್, ಗುರ್ನೂರ್ ಬ್ರಾರ್, ರುತುರಾಜ್ ಗಾಯಕ್ವಾಡ್, ಅರ್ಷದೀಪ್ ಸಿಂಗ್, ಇಶಾನ್ ಕಿಶನ್, ಮೊಹಮ್ಮದ್ ಸಿರಾಜ್, ಆಖಿಬ್ ನಬಿ, ಕುಲ್ದೀಪ್ ಯಾದವ್.

Source: TV9 Kannada Sports

Read full article on TV9 Kannada Sports

Leave a Comment

Your email address will not be published. Required fields are marked *

समाचार की भाषा चुनें / Choose News Language