Hashtagintro

ಸಿರಾಜ್ ಕೈಬಿಟ್ಟಿದ್ದೇಕೆ? ಕೊನೆಗೂ ಅಸಲಿ ಕಾರಣ ಬಿಚ್ಚಿಟ್ಟ ನಾಯಕ ಗಿಲ್

ಸಿರಾಜ್ ಕೈಬಿಟ್ಟಿದ್ದೇಕೆ? ಕೊನೆಗೂ ಅಸಲಿ ಕಾರಣ ಬಿಚ್ಚಿಟ್ಟ ನಾಯಕ ಗಿಲ್

ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಆಡುವ ಹನ್ನೊಂದರ ಬಳಗದಿಂದ ಕೈಬಿಟ್ಟ ನಿರ್ಧಾರದ ಬಗ್ಗೆ ಟೀಂ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಸೋಮವಾರ ಸ್ಪಷ್ಟನೆ ನೀಡಿದ್ದಾರೆ. ಸಿರಾಜ್ ಅವರನ್ನು ತಂಡದಿಂದ ಕೈಬಿಡುವುದು ಸುಲಭದ ನಿರ್ಧಾರವಾಗಿರಲಿಲ್ಲ. ಆದರೆ ಸದ್ಯದ ಫಾರ್ಮ್ ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಗಿಲ್ ಹೇಳಿದ್ದಾರೆ. ವೆಲ್ಲಿಂಗ್ಟನ್‌ನ ಬೇಸಿನ್ ರಿಸರ್ವ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗಿಲ್, ಪಂದ್ಯಕ್ಕೂ ಮುನ್ನ ಸಿರಾಜ್ ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಿ ತಂಡದ ನಿರ್ಧಾರವನ್ನು ವಿವರಿಸಿದ್ದಾಗಿ ತಿಳಿಸಿದ್ದಾರೆ. ಅಲ್ಲದೆ, ಸಿರಾಜ್ ಮುಂದಿನ ದಿನಗಳಲ್ಲಿ ಇನ್ನಷ್ಟು ಬಲವಾಗಿ ತಂಡಕ್ಕೆ ಮರಳಲಿದ್ದಾರೆ ಎಂಬ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.

ನಿಜಕ್ಕೂ ಕಠಿಣ ನಿರ್ಧಾರವಾಗಿತ್ತು

‘ಸಿರಾಜ್ ನನ್ನ ಆತ್ಮೀಯ ಸ್ನೇಹಿತ. ಅವರನ್ನು ತಂಡದಿಂದ ಕೈಬಿಡುವುದು ನಿಜಕ್ಕೂ ಕಠಿಣ ನಿರ್ಧಾರವಾಗಿತ್ತು. ನಾವಿಬ್ಬರೂ ಸಾಕಷ್ಟು ಪಂದ್ಯಗಳನ್ನು ಒಟ್ಟಿಗೆ ಆಡಿದ್ದೇವೆ. ಅವರ ಆರಂಭಿಕ ದಿನಗಳಿಂದಲೂ ನನಗೆ ಪರಿಚಯವಿದೆ. ಟೆಸ್ಟ್ ಪಂದ್ಯಕ್ಕೂ ಮುನ್ನ ಅವರೊಂದಿಗೆ ಮಾತನಾಡಿ ಈ ನಿರ್ಧಾರಕ್ಕೆ ಕಾರಣವನ್ನು ವಿವರಿಸಿದ್ದೆ. ಅವರೂ ಅದನ್ನು ಅರ್ಥಮಾಡಿಕೊಂಡಿದ್ದಾರೆ. ಪ್ರತಿಯೊಬ್ಬ ಆಟಗಾರನಿಗೂ ಫಾರ್ಮ್ ಉತ್ತಮವಾಗಿರದ ಸಮಯ ಬರುತ್ತದೆ. ಹೀಗಾಗಿ ಸದ್ಯದ ಪ್ರದರ್ಶನವನ್ನು ಗಮನದಲ್ಲಿಟ್ಟುಕೊಂಡು ತಂಡದ ಆಯ್ಕೆ ಮಾಡಿದ್ದೇವೆ. ಸಿರಾಜ್ ಎಂತಹ ಆಟಗಾರ ಎಂಬುದು ನನಗೆ ಗೊತ್ತು. ಅವರು ಇನ್ನಷ್ಟು ಬಲವಾಗಿ ಕಮ್‌ಬ್ಯಾಕ್ ಮಾಡಲಿದ್ದಾರೆ’ ಎಂದು ಗಿಲ್ ಹೇಳಿದ್ದಾರೆ.

ಪರ-ವಿರೋಧದ ಚರ್ಚೆಗೆ ಕಾರಣವಾಗಿತ್ತು

ಸಿರಾಜ್ ಅವರನ್ನು ತಂಡದಿಂದ ಕೈಬಿಟ್ಟ ವಿಚಾರ ಇದೀಗ ರಾಜಕೀಯ ವಲಯದಲ್ಲೂ ಚರ್ಚೆಗೆ ಕಾರಣವಾಗಿದೆ. ಕಾಂಗ್ರೆಸ್ ಸಂಸದ ಇಮ್ರಾನ್ ಮಸೂದ್ ಈ ನಿರ್ಧಾರದ ಬಗ್ಗೆ ಪ್ರಶ್ನೆ ಎತ್ತಿದ್ದು, ಹಿಂದಿನ ಉತ್ತಮ ಪ್ರದರ್ಶನಗಳಿದ್ದರೂ ಸಿರಾಜ್ ಅವರ ಹೆಸರಿನ ಕಾರಣಕ್ಕೆ ಅವರನ್ನು ತಂಡದಿಂದ ಹೊರಗಿಡಲಾಗಿದೆ ಎಂದು ಆರೋಪಿಸಿದ್ದರು. ಈ ಹೇಳಿಕೆ ರಾಜಕೀಯ ನಾಯಕರ ನಡುವೆ ಪರ-ವಿರೋಧದ ಚರ್ಚೆಗೆ ಕಾರಣವಾಗಿತ್ತು. ಕೆಲವರು ಮಸೂದ್ ಅವರ ಆರೋಪವನ್ನು ಬೆಂಬಲಿಸಿದರೆ, ಇನ್ನು ಕೆಲವರು ತಂಡದ ಆಯ್ಕೆಯಲ್ಲಿ ಧರ್ಮದ ಆಧಾರದಲ್ಲಿ ತಾರತಮ್ಯ ನಡೆದಿದೆ ಎಂಬ ಆರೋಪವನ್ನು ತಳ್ಳಿಹಾಕಿದ್ದಾರೆ.

ಆದರೆ ಗಿಲ್ ಮಾತ್ರ ಸಿರಾಜ್ ಅವರನ್ನು ಕೈಬಿಟ್ಟ ನಿರ್ಧಾರ ಸಂಪೂರ್ಣವಾಗಿ ಕ್ರಿಕೆಟ್ ಪ್ರದರ್ಶನ ಮತ್ತು ಸದ್ಯದ ಫಾರ್ಮ್ ಆಧರಿಸಿದ್ದಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ. ಸಿರಾಜ್ ಮತ್ತೆ ಉತ್ತಮ ಪ್ರದರ್ಶನದೊಂದಿಗೆ ತಂಡಕ್ಕೆ ಮರಳುವ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.

ಸಿರಾಜ್ ವಿಚಾರದಲ್ಲಿ ಕಾಂಗ್ರೆಸ್‌ನಲ್ಲೇ ಭಿನ್ನಮತ: ಮಸೂದ್‌ಗೆ ರಂಜೀತ್ ರಂಜನ್ ತಿರುಗೇಟು

ನವೆಂಬರ್ 27ರಿಂದ ಎರಡನೇ ಟೆಸ್ಟ್ ಆರಂಭ

ಇದೀಗ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಎರಡನೇ ಹಾಗೂ ಅಂತಿಮ ಟೆಸ್ಟ್ ಪಂದ್ಯಕ್ಕಾಗಿ ಕ್ರೈಸ್ಟ್‌ಚರ್ಚ್‌ಗೆ ಪ್ರಯಾಣಿಸಲಿವೆ. ನವೆಂಬರ್ 27ರಿಂದ ಹ್ಯಾಗ್ಲಿ ಓವಲ್ ಮೈದಾನದಲ್ಲಿ ಎರಡನೇ ಟೆಸ್ಟ್ ಆರಂಭವಾಗಲಿದೆ. ಮೊದಲ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿರುವುದರಿಂದ ಸರಣಿ ಗೆಲ್ಲಲು ಭಾರತ ಈ ಪಂದ್ಯದಲ್ಲಿ ಗೆಲುವು ಸಾಧಿಸಲೇಬೇಕಿದೆ. ಇದಕ್ಕೂ ಮುನ್ನ ನಡೆದ ಐದು ಪಂದ್ಯಗಳ ಟಿ20 ಸರಣಿಯನ್ನು ಭಾರತ 3-2 ಅಂತರದಿಂದ ಗೆದ್ದುಕೊಂಡಿತ್ತು. ಏಕದಿನ ಸರಣಿಯಲ್ಲೂ 3-1 ಅಂತರದ ಗೆಲುವು ದಾಖಲಿಸಿತ್ತು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source: TV9 Kannada Sports

Read full article on TV9 Kannada Sports

Leave a Comment

Your email address will not be published. Required fields are marked *

समाचार की भाषा चुनें / Choose News Language