Hashtagintro

ಹಾಸನಾಂಬೆ ದರ್ಶನೋತ್ಸವ ಸಂಪನ್ನ: ಶಾಸ್ತ್ರೋಕ್ತವಾಗಿ ದೇವಾಲಯದ ಗರ್ಭಗುಡಿ ಬಾಗಿಲು ಬಂದ್

ಹಾಸನಾಂಬೆ ದರ್ಶನೋತ್ಸವ ಸಂಪನ್ನ: ಶಾಸ್ತ್ರೋಕ್ತವಾಗಿ ದೇವಾಲಯದ ಗರ್ಭಗುಡಿ ಬಾಗಿಲು ಬಂದ್

ಹಾಸನ, ನವೆಂಬರ್​​ 11: ಹಾಸನಾಂಬೆಯ ದರ್ಶನೋತ್ಸವ ಯಶಸ್ವಿಯಾಗಿ ಸಂಪನ್ನಗೊಂಡಿದೆ. ಅಕ್ಟೋಬರ್ 29 ರಿಂದ ನವೆಂಬರ್ 11 ರವರೆಗೆ ಒಟ್ಟು 12 ದಿನಗಳ ಕಾಲ ಲಕ್ಷಾಂತರ ಭಕ್ತರಿಗೆ ದರ್ಶನ ಭಾಗ್ಯ ಕರುಣಿಸಿದ ಶಕ್ತಿದೇವತೆಯ ಗರ್ಭಗುಡಿ ಬಾಗಿಲನ್ನು ಬುಧವಾರ ಮಧ್ಯಾಹ್ನ 1.36ಕ್ಕೆ ಶಾಸ್ತ್ರೋಕ್ತವಾಗಿ ಮುಚ್ಚಲಾಯಿತು. ಅರ್ಚಕರು ದೇವಿ ಮೇಲೆ ಹೂ ಹಾಕಿ, ಕೊನೆಯ ಆರತಿ ಬೆಳಗಿ ಪೂಜೆ ಮಾಡಿದರು. ಬಳಿಕ ಗರ್ಭಗುಡಿಯ ಒಳಗೆ ದೀಪ ಹಚ್ಚಿಟ್ಟರು. ಮಧ್ಯಾಹ್ನ 12 ಗಂಟೆಯಿಂದ 1.30ರವರೆಗೆ ರಾಹುಕಾಲ ಇದ್ದ ಹಿನ್ನಲೆ ಈ ಬಾರಿ ತಡವಾಗಿ ಗರ್ಭಗುಡಿಯ ಬಾಗಿಲು ಮುಚ್ಚಲಾಗಿದೆ. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆಎಂ ಶಿವಲಿಂಗೇಗೌಡ, ಸಂಸದ ಶ್ರೇಯಸ್‌ಪಟೇಲ್, ಶಾಸಕ ಹೆಚ್​ಪಿ ಸ್ವರೂಪ್‌ಪ್ರಕಾಶ್ ಮತ್ತು ಜಿಲ್ಲಾಧಿಕಾರಿ ಕೆಎಸ್​ ಲತಾಕುಮಾರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. ಈ ವೇಳೆ ಭಾರಿ ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು ಹಾಸನಾಂಬೆ ತಾಯಿಗೆ ಜೈ,  ಎಂದು ಘೋಷಣೆ ಕೂಗಿದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language