Hashtagintro

198 ರನ್‌ಗಳ ಗುರಿ 14 ಓವರ್‌ಗಳಲ್ಲಿ ಚೇಸ್; ಅಭಿಷೇಕ್ ಅಬ್ಬರಕ್ಕೆ ನ್ಯೂಜಿಲೆಂಡ್ ತತ್ತರ! ಭಾರತಕ್ಕೆ ಸರಣಿ

198 ರನ್‌ಗಳ ಗುರಿ 14 ಓವರ್‌ಗಳಲ್ಲಿ ಚೇಸ್; ಅಭಿಷೇಕ್ ಅಬ್ಬರಕ್ಕೆ ನ್ಯೂಜಿಲೆಂಡ್ ತತ್ತರ! ಭಾರತಕ್ಕೆ ಸರಣಿ

ವೆಲ್ಲಿಂಗ್ಟನ್‌ನ ಹೆನ್ರಿ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಮೂರನೇ ಪಂದ್ಯವನ್ನು ಶ್ರೇಯಸ್ ಅಯ್ಯರ್ ಪಡೆ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ವೈಭವ್ ಸೂರ್ಯವಂಶಿ ಹಾಗೂ ಅಭಿಷೇಕ್ ಶರ್ಮಾರ ಅಬ್ಬರದ ಬ್ಯಾಟಿಂಗ್ ನೆರವಿನಿಂದ ಟೀಂ ಇಂಡಿಯಾ 198 ರನ್​ಗಳ ಗುರಿಯನ್ನು ಸುಲಭವಾಗಿ ಬೆನ್ನಟ್ಟಿತು. ಈ ಚೇಸಿಂಗ್​ನಲ್ಲಿ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಶತಕ ಸಿಡಿಸಿದರೆ, ಅರ್ಧಶತಕ ವಂಚಿತರಾದ ವೈಭವ್45 ರನ್ ಬಾರಿಸಿದರು. ಆದರೆ ಸ್ಫೋಟಕ ಆರಂಭದ ಮೂಲಕ ತಂಡದ ಗೆಲುವನ್ನು ಖಚಿತಪಡಿಸಿ ಪೆವಿಲಿಯನ್ ಸೇರಿಕೊಂಡರು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 198 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಭಾರತ 4 ವಿಕೆಟ್​ಗಳನ್ನು ಕಳೆದುಕೊಂಡು ಕೇವಲ 13.2 ಓವರ್​ಗಳಲ್ಲಿ ಅಂದರೆ ಇನ್ನು 40 ಎಸೆತಗಳು ಬಾಕಿ ಇರುವಂತೆಯೇ ಜಯದ ನಗೆ ಬೀರಿತು. ಈ ಗೆಲುವಿನೊಂದಿಗೆ ಟೀಂ ಇಂಡಿಯಾ ಸತತ ಮೂರು ಪಂದ್ಯಗಳನ್ನು ಗೆದ್ದು ಐದು ಪಂದ್ಯಗಳ ಸರಣಿಯನ್ನು 3-0 ಅಂತರದಿಂದ ತನ್ನದಾಗಿಸಿಕೊಂಡಿದೆ.

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language