Hashtagintro

7 ವರ್ಷಗಳ ಬಳಿಕ ನ್ಯೂಜಿಲೆಂಡ್‌ನಲ್ಲಿ ಸೋತ ಭಾರತ; ಶ್ರೇಯಸ್ ಅಯ್ಯರ್ ಹೇಳಿದ್ದೇನು?

7 ವರ್ಷಗಳ ಬಳಿಕ ನ್ಯೂಜಿಲೆಂಡ್‌ನಲ್ಲಿ ಸೋತ ಭಾರತ; ಶ್ರೇಯಸ್ ಅಯ್ಯರ್ ಹೇಳಿದ್ದೇನು?

ನ್ಯೂಜಿಲೆಂಡ್ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಭಾರತ ತಂಡ 87 ರನ್‌ಗಳ ಹೀನಾಯ ಸೋಲು ಅನುಭವಿಸಿದೆ. ಈ ಪಂದ್ಯದ ಸೋಲಿನೊಂದಿಗೆ ನ್ಯೂಜಿಲೆಂಡ್ ನೆಲದಲ್ಲಿ ಟೀಂ ಇಂಡಿಯಾದ ಗೆಲುವಿನ ಓಟಕ್ಕೂ ಬ್ರೇಕ್ ಬಿದ್ದಿದೆ. ಇದಕ್ಕೂ ಮುನ್ನ ಭಾರತ ತಂಡ ನ್ಯೂಜಿಲೆಂಡ್‌ನಲ್ಲಿ ಆಡಿದ್ದ ಸತತ 10 ಅಂತಾರಾಷ್ಟ್ರೀಯ ಟಿ20 ಪಂದ್ಯಗಳಲ್ಲಿ ಗೆಲುವು ಸಾಧಿಸಿತ್ತು. ಆದರೆ 11ನೇ ಪಂದ್ಯದಲ್ಲಿ ಸೋಲು ಕಾಣುವ ಮೂಲಕ ಏಳು ವರ್ಷಗಳ ಬಳಿಕ ನ್ಯೂಜಿಲೆಂಡ್ ನೆಲದಲ್ಲಿ ಮೊದಲ ಟಿ20 ಸೋಲು ಅನುಭವಿಸಿದೆ.

ಈ ಪಂದ್ಯದಲ್ಲಿ ಭಾರತೀಯ ಬೌಲರ್‌ಗಳು ದುಬಾರಿ ಎನಿಸಿಕೊಂಡರೆ, ಬ್ಯಾಟರ್‌ಗಳು ಕೂಡ ನಿರೀಕ್ಷಿತ ಪ್ರದರ್ಶನ ನೀಡುವಲ್ಲಿ ವಿಫಲರಾದರು. ಪಂದ್ಯದ ಬಳಿಕ ನಾಯಕ ಶ್ರೇಯಸ್ ಅಯ್ಯರ್ ಅವರ ಮಾತಿನಲ್ಲೂ ಸೋಲಿನ ನಿರಾಸೆ ಎದ್ದು ಕಾಣುತ್ತಿತ್ತು. ಪವರ್‌ಪ್ಲೇನಲ್ಲೇ ಹೆಚ್ಚು ವಿಕೆಟ್ ಕಳೆದುಕೊಂಡಿದ್ದೇ ಸೋಲಿಗೆ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ಮುಂದಿನ ಪಂದ್ಯದಲ್ಲಿ ತಂಡ ಮತ್ತೆ ಗೆಲುವಿನ ಹಾದಿಗೆ ಮರಳುವ ವಿಶ್ವಾಸವನ್ನೂ ವ್ಯಕ್ತಪಡಿಸಿದ್ದಾರೆ.

ಬೌಲಿಂಗ್​ನಲ್ಲಿ ಎಡವಿದೆವು; ಅಯ್ಯರ್

ಆಕ್ಲೆಂಡ್‌ನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಸೋತ ಬಳಿಕ ಮಾತನಾಡಿದ ನಾಯಕ ಶ್ರೇಯಸ್ ಅಯ್ಯರ್, ಆರಂಭಿಕ ಹಂತದಲ್ಲಿ ಭಾರತೀಯ ಬೌಲರ್‌ಗಳು ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲರಾದರು ಎಂದು ಒಪ್ಪಿಕೊಂಡಿದ್ದಾರೆ. ‘ಆರಂಭದಲ್ಲಿ ನಮ್ಮ ಬೌಲಿಂಗ್ ಸ್ವಲ್ಪ ದುರ್ಬಲವಾಗಿತ್ತು ಎಂದು ಅನಿಸಿತು. ನ್ಯೂಜಿಲೆಂಡ್ ತಂಡ ಪವರ್‌ಪ್ಲೇನಲ್ಲೇ, ಅದರಲ್ಲೂ ಮೂರನೇ ಓವರ್‌ನಿಂದ ರನ್ ಗಳಿಸುವ ವೇಗ ಹೆಚ್ಚಿಸಿಕೊಂಡಿತು. ನಮ್ಮ ಕೆಲವು ಬೌಲರ್‌ಗಳು ಒತ್ತಡ ಸೃಷ್ಟಿಸಲು ಪ್ರಯತ್ನಿಸಿದರೂ ಗ್ಲೆನ್ ಫಿಲಿಪ್ಸ್ ಅವರ ಆಟ ಅದ್ಭುತವಾಗಿತ್ತು. ಅವರು ಅತ್ಯುತ್ತಮ ಹೊಡೆತಗಳನ್ನು ಬಾರಿಸಿದರು. ಅವರ ಬ್ಯಾಟಿಂಗ್ ನೋಡುವುದೇ ಖುಷಿ ನೀಡಿತು. ಅವರು ನಿಜಕ್ಕೂ ಪ್ರಶಂಸೆಗೆ ಅರ್ಹರು. ಇಡೀ ಸರಣಿಯಲ್ಲಿ ಸ್ಥಿರವಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರ ಆಟದಿಂದ ನಾವು ಸಾಕಷ್ಟು ಕಲಿಯಬೇಕಿದೆ. ನಮ್ಮ ಬೌಲಿಂಗ್‌ನಲ್ಲಿ ಎಲ್ಲಿ ಸುಧಾರಣೆ ಮಾಡಿಕೊಳ್ಳಬೇಕು ಎಂಬುದನ್ನು ಗುರುತಿಸುವುದು ಈಗ ಮುಖ್ಯ’ಎಂದು ಅಯ್ಯರ್ ಹೇಳಿದ್ದಾರೆ.

ಬುಮ್ರಾ, ಭುವಿ ಹಿಂದಿಕ್ಕಿದ ಅರ್ಷದೀಪ್! ಟಿ20ಯಲ್ಲಿ ಐತಿಹಾಸಿಕ ಸಾಧನೆ

ಮುಂದಿನ ಪಂದ್ಯಕ್ಕೆ ಹೊಸ ತಂತ್ರ

ನಾಲ್ಕನೇ ಟಿ20 ಪಂದ್ಯದಲ್ಲಿ ಎದುರಾದ ಸೋಲಿನ ಬಳಿಕ ಮುಂದಿನ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡಲು ತಂಡ ಹೊಸ ಯೋಜನೆ ರೂಪಿಸಲಿದೆ ಎಂದು ಶ್ರೇಯಸ್ ಅಯ್ಯರ್ ತಿಳಿಸಿದ್ದಾರೆ. ‘ನಾವು ಈಗ ಹ್ಯಾಮಿಲ್ಟನ್‌ಗೆ ಪ್ರಯಾಣಿಸಲಿದ್ದೇವೆ. ಮುಂದಿನ ಪಂದ್ಯದ ನಡುವೆ ಕೇವಲ ಒಂದು ದಿನದ ವಿರಾಮವಿದೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ನಮ್ಮ ಸಂಪೂರ್ಣ ಸಾಮರ್ಥ್ಯ ಪ್ರದರ್ಶಿಸಲು ಹೊಸ ತಂತ್ರ ರೂಪಿಸಬೇಕಿದೆ. ಮೈದಾನದ ಗಾತ್ರದ ಬಗ್ಗೆಯೂ ಆಟಗಾರರೊಂದಿಗೆ ಚರ್ಚೆ ನಡೆಸಿದ್ದೆವು. ಮೈದಾನ ಇಷ್ಟೊಂದು ದೊಡ್ಡದಾಗಿರಲಿದೆ ಎಂಬುದು ನಮಗೆ ಮೊದಲೇ ತಿಳಿದಿತ್ತು. ಕೆಲವು ಆಟಗಾರರಿಗೆ ಇಂತಹ ಮೈದಾನದಲ್ಲಿ ಆಡುವುದು ಇದೇ ಮೊದಲ ಅನುಭವ. ಹೀಗಾಗಿ ಅಲ್ಲಿನ ಪರಿಸ್ಥಿತಿಗೆ ಹೊಂದಿಕೊಳ್ಳಲು ಸ್ವಲ್ಪ ಸಮಯ ಬೇಕಾಗುತ್ತದೆ. ಇದು ಸುಲಭದ ಕೆಲಸವಲ್ಲ ಎಂಬುದು ನನಗೆ ಗೊತ್ತಿದೆ. ಆದರೂ ಮೊದಲ ಮೂರು ಪಂದ್ಯಗಳಲ್ಲಿ ನಮ್ಮ ಆಟಗಾರರು ನೀಡಿದ ಪ್ರದರ್ಶನ ನಿಜಕ್ಕೂ ಅದ್ಭುತವಾಗಿತ್ತು’ ಎಂದು ಶ್ರೇಯಸ್ ಅಯ್ಯರ್ ಹೇಳಿದ್ದಾರೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source: TV9 Kannada Sports

Read full article on TV9 Kannada Sports

Leave a Comment

Your email address will not be published. Required fields are marked *

समाचार की भाषा चुनें / Choose News Language