Hashtagintro

ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಅಭಿಷೇಕ್ ಶರ್ಮಾ..!

ಕೇವಲ 15 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಅಭಿಷೇಕ್ ಶರ್ಮಾ..!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಐದು ಪಂದ್ಯಗಳ ಟಿ20ಐ ಸರಣಿಯ ಮೂರನೇ ಪಂದ್ಯ ವೆಲ್ಲಿಂಗ್ಟನ್‌ನ ಹೆನ್ರಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 198 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ಭಾರತಕ್ಕೆ ಭರ್ಜರಿ ಆರಂಭ ಸಿಕ್ಕಿದ್ದು, ಮೊದಲ 4 ಓವರ್​ಗಳಲ್ಲಿ ಬರೋಬ್ಬರಿ 84 ರನ್ ಕಲೆಹಾಕಿದೆ. ಈ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ವೈಭವ್ ಸೂರ್ಯವಂಶಿ ಹಾಗೂ ಅಭಿಷೇಕ್ ಶರ್ಮಾ ಮೈದಾನದಲ್ಲಿ ಸಿಕ್ಸರ್​ಗಳ ಮಳೆ ಸುರಿಸಿದರು. ಇದರ ಪರಿಣಾಮವಾಗಿ ಅಭಿಷೇಕ್ ಶರ್ಮಾ ಕೇವಲ 15 ಎಸೆತಗಳಲ್ಲಿ ತಮ್ಮ ಅರ್ಧಶತಕ ಪೂರೈಸಿದರು. ಈ ಅರ್ಧಶತಕದಲ್ಲಿ 5 ಬೌಂಡರಿ ಹಾಗೂ 6 ಭರ್ಜರಿ ಸಿಕ್ಸರ್​ಗಳು ಸೇರಿದ್ದವು.

ಈ ಪಂದ್ಯಕ್ಕೆ ಭಾರತದ ಆರಂಭಿಕ ಜೋಡಿ ಬದಲಾಗಿತ್ತು. ಸಂಜು ಸ್ಯಾಮ್ಸನ್ ಬದಲಿಗೆ ವೈಭವ್ ಸೂರ್ಯವಂಶಿ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆರಂಭಿಕರು ಬದಲಾದರೂ ತಂಡದ ಆರಂಭಕ್ಕೆ ಯಾವುದೇ ಭಂಗ ಬರಲಿಲ್ಲ. ಇವರಿಬ್ಬರು ಮೊದಲ ಎಸೆತದಿಂದಲೇ ಕಿವೀಸ್ ಬೌಲರ್​ಗಳ ಬೆಂಡೆತಲು ಶುರು ಮಾಡಿದರು. ಇದರ ಫಲವಾಗಿ ಜೇಕಬ್ ಡಫಿ ಬೌಲ್ ಮಾಡಿದ ಮೊದಲ ಓವರ್​ನ ಮೊದಲ ಎಸೆತದಲ್ಲೇ ವೈಭವ್ ಬೌಂಡರಿ ಬಾರಿಸಿದರೆ, ಮೂರನೇ ಎಸೆತವನ್ನು ಸಿಕ್ಸರ್‌ಗೆ ಅಟ್ಟಿದರು. ಇತ್ತ ಅಭಿಷೇಕ್ ಶರ್ಮಾ ಕೂಡ ತಾವು ಎದುರಿಸಿದ ಮೊದಲ ಎಸೆತವನ್ನೇ ಸಿಕ್ಸರ್‌ಗೆ ಎತ್ತಿದರು. ಹೀಗಾಗಿ ಮೊದಲ ಓವರ್‌ನಲ್ಲೇ ಭಾರತ ವಿಕೆಟ್ ನಷ್ಟವಿಲ್ಲದೆ 26 ರನ್ ಕಲೆಹಾಕಿತು.

Source: TV9 Kannada Sports

Read full article on TV9 Kannada Sports

Leave a Comment

Your email address will not be published. Required fields are marked *

समाचार की भाषा चुनें / Choose News Language