Hashtagintro

ರೇಣುಕಾಸ್ವಾಮಿ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್

ರೇಣುಕಾಸ್ವಾಮಿ ಕೊಲೆ ಪ್ರಕರಣ; ಕೋರ್ಟ್‌ನಲ್ಲಿ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್

ನಟ ದರ್ಶನ್ ಹಾಗೂ ಗ್ಯಾಂಗ್‌ನಿಂದ ನಡೆದಿದೆಯನ್ನಲಾದ ರೇಣುಕಾಸ್ವಾಮಿ ಕೊಲೆ ಪ್ರಕರಣದ ವಿಚಾರಣೆಯಲ್ಲಿ ಮಹತ್ವದ ತಿರುವು ಸಿಕ್ಕಿದೆ. ನಗರದ 59ನೇ ಸಿಸಿಹೆಚ್ ಕೋರ್ಟ್‌ನಲ್ಲಿ ನಡೆಯುತ್ತಿರುವ ಸಾಕ್ಷಿ ವಿಚಾರಣೆ ವೇಳೆ ಪ್ರತ್ಯಕ್ಷ ಸಾಕ್ಷಿ ಪುನೀತ್ ಕೋರ್ಟ್‌ನಲ್ಲಿ ಉಲ್ಟಾ ಹೊಡೆದಿದ್ದಾನೆ.

ಸಾಕ್ಷಿ ವಿಚಾರಣೆ ಸಂದರ್ಭದಲ್ಲಿ ಪುನೀತ್, ಶೆಡ್ ಬಳಿ ನಟ ದರ್ಶನ್ ಹಾಗೂ ಪವಿತ್ರಾಗೌಡ ಸೇರಿದಂತೆ ಯಾವುದೇ ಆರೋಪಿಗಳು ಬಂದಿರಲಿಲ್ಲ ಎಂದು ಹೇಳಿಕೆ ನೀಡಿದ್ದಾನೆ. ಕೋರ್ಟ್‌ ಹಾಜರಿದ್ದ ಹಾಗೂ ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದ ಯಾವುದೇ ಆರೋಪಿಗಳನ್ನು ತಾವು ಘಟನಾ ಸ್ಥಳದಲ್ಲಿ ನೋಡಿರಲಿಲ್ಲ ಎಂದು ತಿಳಿಸಿದ್ದಾನೆ.

ಈ ಮುಂಚೆ ನ್ಯಾಯಾಧೀಶರ ಮುಂದೆ ಸಿಆರ್‌ಪಿಸಿ 164ರ ಅಡಿಯಲ್ಲಿ ನೀಡಿದ್ದ ಹೇಳಿಕೆಯಿಂದ ಪುನೀತ್ ಸಂಪೂರ್ಣವಾಗಿ ಹಿಂದೆ ಸರಿದಿದ್ದಾನೆ. ತನ್ನ ಹಿಂದಿನ ಹೇಳಿಕೆಗೆ ವಿರುದ್ಧವಾಗಿ ನಡೆದುಕೊಂಡ ಹಿನ್ನೆಲೆಯಲ್ಲಿ ಕೋರ್ಟ್‌ನಲ್ಲಿ ಆತನನ್ನು ಪ್ರತಿಕೂಲ ಸಾಕ್ಷಿ ಎಂದು ಪರಿಗಣಿಸಲಾಗಿದೆ.

ಸಾಕ್ಷಿಯ ಭಾಗಶಃ ಹೇಳಿಕೆಯನ್ನು ದಾಖಲಿಸಿಕೊಂಡಿರುವ ನ್ಯಾಯಾಲಯ, ಮುಂದಿನ ವಿಚಾರಣೆಯನ್ನು ಅಕ್ಟೋಬರ್ 29ಕ್ಕೆ ಮುಂದೂಡಿದೆ. ಪ್ರತ್ಯಕ್ಷ ಸಾಕ್ಷಿಯೇ ಹೀಗೆ ಮಾತು ಬದಲಿಸಿ ಪ್ರತಿಕೂಲ ಸಾಕ್ಷಿಯಾಗಿ ಬದಲಾಗಿರುವುದು ಪ್ರಕರಣದ ತನಿಖಾ ಹಂತದಲ್ಲಿ ಪ್ರಮುಖ ಬೆಳವಣಿಗೆಯಾಗಿದೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಕೇಸ್: ವಿಚಾರಣೆಗೆ ಗೈರು, ಪ್ರತ್ಯಕ್ಷ ಸಾಕ್ಷಿ ಪುನೀತ್ ಬಂಧನಕ್ಕೆ ವಾರೆಂಟ್

ನೋಟಿಸ್ ಜಾರಿಯಾಗಿತ್ತು..

ಪುನೀತ್ ಡಿ ಕಂಪೆನಿ ಫ್ಯಾನ್ ಪೇಜಿನ ಅಡ್ಮಿನ್ ಎನ್ನಲಾಗಿದೆ. ಈತ ದರ್ಶನ್​​ ಆಪ್ತ. ಈತ ಪ್ರಕರಣದ ಪ್ರತ್ಯಕ್ಷ ಸಾಕ್ಷಿ ಆಗಿದ್ದ. ಈತ ವಿಚಾರಣೆಗೆ ಗೈರಾದ ಕಾರಣ ಆತನ ವಿರುದ್ಧ ಸಮನ್ಸ್ ಜಾರಿ ಮಾಡಿ, ಬಂಧನದ ವಾರೆಂಟ್ ಹೊರಡಿಸಲಾಗಿತ್ತು. ಈಗ ಆತ ವಿಚಾರಣೆಗೆ ಹಾಜರಾಗಿ ಭಿನ್ನ ಹೇಳಿಕೆ ನೀಡಿದ್ದಾನೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source: TV9 Kannada Entertainment

Read full article on TV9 Kannada Entertainment

Leave a Comment

Your email address will not be published. Required fields are marked *

समाचार की भाषा चुनें / Choose News Language