Hashtagintro

ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ಗೆ ಭಾರತ ಎ ತಂಡ ಪ್ರಕಟ; ತಿಲಕ್ ನಾಯಕ, ವೈಭವ್​ಗೆ ಸ್ಥಾನ

ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ಗೆ ಭಾರತ ಎ ತಂಡ ಪ್ರಕಟ; ತಿಲಕ್ ನಾಯಕ, ವೈಭವ್​ಗೆ ಸ್ಥಾನ

ನವೆಂಬರ್ 19ರಿಂದ 29ರವರೆಗೆ ಕತಾರ್‌ನ ದೋಹಾದಲ್ಲಿ ನಡೆಯಲಿರುವ ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಪುರುಷರ ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್ ಟೂರ್ನಿಗೆ ಭಾರತ ಎ ತಂಡವನ್ನು ಪ್ರಕಟಿಸಲಾಗಿದೆ. ಮುಂಬರುವ ಟೂರ್ನಿಗಾಗಿ ಪುರುಷರ ಆಯ್ಕೆ ಸಮಿತಿಯು 15 ಆಟಗಾರರ ತಂಡವನ್ನು ಆಯ್ಕೆ ಮಾಡಿದೆ. ಬಿಸಿಸಿಐ ಪ್ರಕಟಿಸಿರುವ ಭಾರತ ಎ ತಂಡಕ್ಕೆ ತಿಲಕ್ ವರ್ಮಾ ನಾಯಕನಾಗಿ ಆಯ್ಕೆಯಾಗಿದ್ದಾರೆ. ರಾಜತ್ ಪಾಟಿದಾರ್ ಉಪನಾಯಕನ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ತಂಡದಲ್ಲಿ ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ರಿಂಕು ಸಿಂಗ್ ಸೇರಿದಂತೆ ಹಲವು ಪ್ರತಿಭಾವಂತ ಆಟಗಾರರಿಗೆ ಅವಕಾಶ ನೀಡಲಾಗಿದೆ. ಪ್ರಭ್‌ಸಿಮ್ರನ್ ಸಿಂಗ್ ಮತ್ತು ಕುಮಾರ್ ಕುಶಾಗ್ರ ವಿಕೆಟ್ ಕೀಪರ್‌ಗಳಾಗಿ ಸ್ಥಾನ ಪಡೆದಿದ್ದಾರೆ.

ಈ ಬಾರಿಯ ಟೂರ್ನಿಯಲ್ಲಿ ಮಹತ್ವದ ಬದಲಾವಣೆಯೂ ಇದೆ. ಕಳೆದ ಆವೃತ್ತಿಯನ್ನು ಟಿ20 ಮಾದರಿಯಲ್ಲಿ ನಡೆಸಲಾಗಿತ್ತು. ಆದರೆ, ಈ ಬಾರಿ ಪಂದ್ಯಾವಳಿ 50 ಓವರ್‌ಗಳ ಮಾದರಿಯಲ್ಲಿ ನಡೆಯಲಿದೆ. ಒಟ್ಟು ಎಂಟು ತಂಡಗಳು ಟೂರ್ನಿಯಲ್ಲಿ ಭಾಗವಹಿಸಲಿದ್ದು, ಅವುಗಳನ್ನು ಎರಡು ಗುಂಪುಗಳಾಗಿ ವಿಂಗಡಿಸಲಾಗಿದೆ.

ಯಾವ ತಂಡ ಯಾವ ಗುಂಪಿನಲ್ಲಿದೆ?

ಗುಂಪು ಎ

  • ಶ್ರೀಲಂಕಾ ಎ
  • ಬಾಂಗ್ಲಾದೇಶ ಎ
  • ಅಫ್ಘಾನಿಸ್ತಾನ ಎ
  • ಹಾಂಗ್ ಕಾಂಗ್

ಗುಂಪು ಬಿ

  • ಭಾರತ ಎ
  • ಪಾಕಿಸ್ತಾನ ಎ
  • ನೇಪಾಳ
  • ಯುಎಇ

ಲೀಗ್ ಹಂತದಲ್ಲಿ ಪ್ರತಿ ತಂಡವು ತನ್ನ ಗುಂಪಿನ ಉಳಿದ ಮೂರು ತಂಡಗಳ ವಿರುದ್ಧ ತಲಾ ಒಂದು ಪಂದ್ಯ ಆಡಲಿದೆ. ಈ ಹಂತದಲ್ಲಿ ಒಟ್ಟು 12 ಪಂದ್ಯಗಳು ನಡೆಯಲಿವೆ. ಎರಡೂ ಗುಂಪುಗಳಲ್ಲಿ ಅಗ್ರ ಎರಡು ಸ್ಥಾನ ಪಡೆಯುವ ತಂಡಗಳು ಸೆಮಿಫೈನಲ್‌ಗೆ ಅರ್ಹತೆ ಪಡೆಯಲಿವೆ.

ಭಾರತ-ಪಾಕ್ ಹೈವೋಲ್ಟೇಜ್ ಕದನ

ಈ ಟೂರ್ನಿಯಲ್ಲಿ ಕ್ರಿಕೆಟ್ ಅಭಿಮಾನಿಗಳು ಕಾತರದಿಂದ ಕಾಯುತ್ತಿರುವ ಪಂದ್ಯ ಭಾರತ ಎ ಮತ್ತು ಪಾಕಿಸ್ತಾನ ಎ ತಂಡಗಳ ನಡುವಿನ ಮುಖಾಮುಖಿ. ಈ ಹೈವೋಲ್ಟೇಜ್ ಪಂದ್ಯ ನವೆಂಬರ್ 22ರಂದು ಮಧ್ಯಾಹ್ನ 3:30ಕ್ಕೆ ನಡೆಯಲಿದೆ. ದೋಹಾದ ವೆಸ್ಟ್ ಎಂಡ್ ಪಾರ್ಕ್ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಎರಡೂ ತಂಡಗಳ ನಡುವಿನ ಪೈಪೋಟಿ ಹೇಗಿರಲಿದೆ ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ.

ರೈಸಿಂಗ್ ಸ್ಟಾರ್ಸ್ ಏಷ್ಯಾಕಪ್‌ಗೆ ಭಾರತ ಎ ತಂಡ

ಅಭಿಷೇಕ್ ಶರ್ಮಾ, ವೈಭವ್ ಸೂರ್ಯವಂಶಿ, ಪ್ರಭ್‌ಸಿಮ್ರನ್ ಸಿಂಗ್ (ವಿಕೆಟ್ ಕೀಪರ್), ತಿಲಕ್ ವರ್ಮಾ (ನಾಯಕ), ರಾಜತ್ ಪಾಟಿದಾರ್ (ಉಪನಾಯಕ), ರಿಂಕು ಸಿಂಗ್, ಕುಮಾರ್ ಕುಶಾಗ್ರ (ವಿಕೆಟ್ ಕೀಪರ್), ಸೂರ್ಯಾಂಶ್ ಶೆಡ್ಗೆ, ಶಹಬಾಜ್ ಅಹ್ಮದ್, ವಿಪ್ರಜ್ ನಿಗಮ್, ಹರ್ಷ್ ದುಬೆ, ತನುಷ್ ಕೋಟ್ಯಾನ್, ಹರ್ಷಿತ್ ರಾಣಾ, ಪ್ರಿನ್ಸ್ ಯಾದವ್ ಮತ್ತು ಅರ್ಷದ್ ಖಾನ್.

ಟೀಂ ಇಂಡಿಯಾದ ವೇಳಾಪಟ್ಟಿ

  • ನವೆಂಬರ್ 20, ಭಾರತ ಎ vs ನೇಪಾಳ, ವೆಸ್ಟ್ ಎಂಡ್ ಪಾರ್ಕ್ ಅಂತಾರಾಷ್ಟ್ರೀಯ ಕ್ರೀಡಾಂಗಣ.
  • ನವೆಂಬರ್ 22, ಭಾರತ ಎ vs ಪಾಕಿಸ್ತಾನ ಎ, ವೆಸ್ಟ್ ಎಂಡ್ ಪಾರ್ಕ್ ಅಂತಾರಾಷ್ಟ್ರೀಯ ಕ್ರೀಡಾಂಗಣ.
  • ನವೆಂಬರ್ 24, ಭಾರತ ಎ vs ಯುಎಇ, ಯೂನಿವರ್ಸಿಟಿ ಆಫ್ ದೋಹಾ ಫಾರ್ ಸೈನ್ಸ್ ಅಂಡ್ ಟೆಕ್ನಾಲಜಿ.

ಅಂಡರ್-19 ಏಷ್ಯಾಕಪ್‌ಗೆ ಭಾರತ ತಂಡ ಪ್ರಕಟ: ಸೆಹ್ವಾಗ್, ದ್ರಾವಿಡ್ ಪುತ್ರರಿಗೆ ಸ್ಥಾನ

ನವೆಂಬರ್ 29ರಂದು ಫೈನಲ್

ಲೀಗ್ ಹಂತದ ಪಂದ್ಯಗಳು ನವೆಂಬರ್ 24ರಂದು ಮುಕ್ತಾಯಗೊಳ್ಳಲಿವೆ. ಬಳಿಕ ನವೆಂಬರ್ 26ರಂದು ಮೊದಲ ಸೆಮಿಫೈನಲ್ ಹಾಗೂ ನವೆಂಬರ್ 27ರಂದು ಎರಡನೇ ಸೆಮಿಫೈನಲ್ ನಡೆಯಲಿದೆ. ಟೂರ್ನಿಯ ಫೈನಲ್ ಪಂದ್ಯ ನವೆಂಬರ್ 29ರಂದು ದೋಹಾದ ವೆಸ್ಟ್ ಎಂಡ್ ಪಾರ್ಕ್‌ನಲ್ಲಿ ನಡೆಯಲಿದೆ. ಈ ಬಾರಿಯ ಟೂರ್ನಿಯಲ್ಲಿ ಎಲ್ಲರ ಗಮನ ಭಾರತ ಎ ಮತ್ತು ಪಾಕಿಸ್ತಾನ ಎ ತಂಡಗಳ ನಡುವಿನ ಕದನದ ಮೇಲಿದೆ. ಹಾಲಿ ಚಾಂಪಿಯನ್ ಪಾಕಿಸ್ತಾನ ಎ ತಂಡಕ್ಕೆ ಭಾರತ ಎ ತಂಡ ಯಾವ ರೀತಿಯಲ್ಲಿ ಪೈಪೋಟಿ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source: TV9 Kannada Sports

Read full article on TV9 Kannada Sports

Leave a Comment

Your email address will not be published. Required fields are marked *

समाचार की भाषा चुनें / Choose News Language