Hashtagintro

ಹಿರಿಯೂರು ಉಪ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧಾರ: ಇಲ್ಲಿದೆ ಜೆಡಿಎಸ್, ಬಿಜೆಪಿ ನಾಯಕರ ಸಭೆಯ ವಿವರ

ಹಿರಿಯೂರು ಉಪ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧಾರ: ಇಲ್ಲಿದೆ ಜೆಡಿಎಸ್, ಬಿಜೆಪಿ ನಾಯಕರ ಸಭೆಯ ವಿವರ

ಬೆಂಗಳೂರು, ನವೆಂಬರ್ 26: ಹಿರಿಯೂರು ವಿಧಾನಸಭೆ ಉಪಚುನಾವಣೆ ಹಾಗೂ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಏರ್ಪಟ್ಟಿದ್ದ ಗೊಂದಲವನ್ನು ಸರಿ ಮಾಡಿಕೊಳ್ಳಲು ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮುಂದಾಗಿದ್ದು, ಈ ಸಂಬಂಧ ಇಂದು (ನವೆಂಬರ್ 26) ಮಹತ್ವದ ಸಭೆ ನಡೆಸಿದ್ದಾರೆ. ದೋಸ್ತಿ ಮುಂಬರುವ ವಿಧಾನಸಭಾ ಚುನಾವಣೆವರೆಗೂ ಚೆನ್ನಾಗಿರಬೇಕೆಂದು ಈ ಸಭೆ ಮಾಡಿ ಎಲ್ಲಾ ಗೊಂದಲಗಳಿಗೆ ತೆರೆ ಎಳೆಯಲಾಗಿದೆ. ಇನ್ನು ಈ ಸಭೆಯಲ್ಲಿ ಹಿರಿಯೂರು ಉಪ ಚುನಾವಣೆಗೆ ಒಮ್ಮತದ ಅಭ್ಯರ್ಥಿ ಕಣಕ್ಕಿಳಿಸಲು ನಿರ್ಧರಿಸಲಾಗಿದ್ದು, ದೆಹಲಿ ನಾಯಕರ ಜೊತೆ ಮತ್ತೊಂದು ಸುತ್ತಿನ ಸಮಾಲೋಚನೆಯ ನಂತರ ಅಭ್ಯರ್ಥಿ ಹೆಸರು ಅಂತಿಮಗೊಳಿಸುವ ಬಗ್ಗೆ ತೀರ್ಮಾನವಾಗಿದೆ. ಇನ್ನು ಸಭೆ ಬಳಿಕ ಕೇಂದ್ರ ಸಚಿವ ಹೆಚ್​​​ಡಿ ಕುಮಾರಸ್ವಾಮಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು, ಏನೆಲ್ಲಾ ಹೇಳಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language