Hashtagintro

Karnataka Weather Forecast: ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ!

Karnataka Weather Forecast: ಬೆಂಗಳೂರು ಸೇರಿದಂತೆ 9 ಜಿಲ್ಲೆಗಳಿಗೆ ಅಕ್ಟೋಬರ್ 22ರವರೆಗೆ ಯೆಲ್ಲೋ ಅಲರ್ಟ್ ಘೋಷಣೆ!

ಬೆಂಗಳೂರು, ಅಕ್ಟೋಬರ್ 17: ರಾಜ್ಯದಲ್ಲಿ ಈಶಾನ್ಯ ಮಾರುತಗಳು ಹಾಗೂ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಅಕ್ಟೋಬರ್ 22ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇರುವುದರಿಂದ, ಮುಂಜಾಗ್ರತಾ ಕ್ರಮವಾಗಿ ವಿವಿಧ ಕಡೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಕರ್ನಾಟಕ

ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಗುಡುಗು ಸಹಿತ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಕಡಲ ತೀರದ ಈ ಭಾಗಗಳಲ್ಲಿ ಆಗಾಗ್ಗೆ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಮುನ್ನೆಚ್ಚರಿಕೆ ವಹಿಸಲು ಸೂಚಿಸಿದೆ.

ದಕ್ಷಿಣ ಒಳನಾಡು

ಬೆಂಗಳೂರು ನಗರ, ಗ್ರಾಮಾಂತರ ಹಾಗೂ ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು ಮತ್ತು ಕೊಡಗು ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ವ್ಯಾಪಕ ಮಳೆ ಮುಂದುವರಿಯಲಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ರಾಮನಗರದಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಸಾರ್ವಜನಿಕರಿಗೆ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

ಉತ್ತರ ಒಳನಾಡು

ಬೆಳಗಾವಿ, ಗದಗ, ಧಾರವಾಡ, ಹಾವೇರಿ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಂಭವವಿದೆ. ಈ ಪ್ರದೇಶಗಳಲ್ಲಿ ಮಳೆಯೊಂದಿಗೆ ಗಂಟೆಗೆ 30 ರಿಂದ 40 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಕೇಂದ್ರ ತಿಳಿಸಿದೆ.

ನಾಳಿನ ಹವಾಮಾನ ಮುನ್ಸೂಚನೆ

ಅಕ್ಟೋಬರ್ 18ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ. ಹಾಗೆಯೇ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಹಾಗೂ ಉತ್ತರ ಒಳನಾಡಿನ ಅಲ್ಲಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source: TV9 Kannada National

Read full article on TV9 Kannada National

Leave a Comment

Your email address will not be published. Required fields are marked *

समाचार की भाषा चुनें / Choose News Language